ಸ್ವಚ್ಛ ಕೊಡಗು-ಸುಂದರ ಕೊಡಗು: ಸೋಮವಾರಪೇಟೆ ಸಂತ ಜೋಸೆಫರ ಪದವಿ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ
"ಸೋಮವಾರಪೇಟೆಯ ಸಂತ ಜೋಸೆಫ್ ಪದವಿ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕರು "ಸ್ವಚ್ಛ ಕೊಡಗು, ಸುಂದರ ಕೊಡಗು" ಅಭಿಯಾನದಲ್ಲಿ ಭಾಗವಹಿಸಿದರು. ಸಂಸ್ಥೆಯ ವ್ಯವಸ್ಥಾಪಕರಾದ ಫಾದರ್ ಅವಿನಾಶ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಹರೀಶ್ ಬಿ.ಆರ್., ಎನ್ಎಸ್ಎಸ್ ಸಂಯೋಜಕರಾದ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಚಂದ್ರಶೇಖರಮೂರ್ತಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದರು.