ಕೊಡಗು ವಿಶ್ವವಿದ್ಯಾಲಯದಲ್ಲಿ ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನ
ಕುಶಾಲನಗರ:ಕೊಡಗು ವಿಶ್ವವಿದ್ಯಾಲಯ, ಕೊಡಗು ವತಿಯಿಂದ ಜ್ಞಾನ ಕಾವೇರಿ ಆವರಣದಲ್ಲಿ ಸ್ವಚ್ಛ ಕೊಡಗು- ಸುಂದರ ಕೊಡಗು ಎಂಬ ಸ್ವಚ್ಚತಾ ಅಭಿಯಾನಕ್ಕೆ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ., ಸಿಂಡಿಕೇಟ್ ಸದಸ್ಯರುಗಳಾದ ಡಾ. ಸರಸ್ವತಿ, ಶ್ರೀಮತಿ. ತೃಪ್ತಿ ಬೋಪಣ್ಣ, ಕು. ಲಿಖಿತಾ ಅವರು, ವಿವಿಧ ವಿಭಾಗದ ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು, ಸ್ನಾತಕ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.