Kodagu

ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಅಭಿಯಾನ

admincoorgdaily

ಹೊನ್ನಮ್ಮನ ಕೆರೆ ಆವರಣದಲ್ಲಿ  ಸ್ವಚ್ಛತಾ ಅಭಿಯಾನ

ಸೋಮವಾರಪೇಟೆ: ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ ಕುಮಾರ್ ವಿ. ಅವರ ಅಧ್ಯಕ್ಷತೆಯಲ್ಲಿ ದೊಡ್ಡಮಾಲ್ತೆ ಗ್ರಾ.ಪಂ. ವ್ಯಾಪ್ತಿಯ ಐತಿಹಾಸಿಕ ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

 ಗ್ರಾಮ ಪಂಚಾಯಿತಿ, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೆರೆಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ದೊಡ್ಡಮಾಲ್ತೆ, ಗೌಡಳ್ಳಿ, ಗಣಗೂರು, ನೆರುಗಳಲೆ, ಹಾನಗಲ್ಲು, ಚೌಡ್ಲು ಗ್ರಾಮ ಪಂಚಾಯಿತಿಗಳ ಪಿಡಿಒಗಳು, ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮತ್ತು ಸದಸ್ಯರು, NRLM ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.