ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ :ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು:ಎಮ್ಮೆಮಾಡುವಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಪ್ರಥಮ ಹಾಗೂ ದ್ವಿತೀಯ ಸ್ಥಾನಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
