ಬೈಕ್ ಹಾಗೂ ಬಸ್ಸ್ ನಡುವೆ ಡಿಕ್ಕಿ: ಸವಾರನಿಗೆ ಗಂಭೀರ ‌ಗಾಯ

Jun 27, 2026 - 18:52
 0  3.4k
ಬೈಕ್ ಹಾಗೂ ಬಸ್ಸ್ ನಡುವೆ ಡಿಕ್ಕಿ: ಸವಾರನಿಗೆ ಗಂಭೀರ ‌ಗಾಯ

ಸಿದ್ದಾಪುರ: ಪಾಲಿಬೆಟ್ಟ ಸಮೀಪದ ಹಂಚಿಕಾಡು ಪ್ರದೇಶದಲ್ಲಿ ಶನಿವಾರ ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಅಪಘಾತದ ತೀವ್ರತೆಗೆ ಬೈಕ್ ಸವಾರ ಮಿಲನ್ ಅವರಿಗೆ ತಲೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಅವರನ್ನು ಅಮ್ಮತ್ತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ಸಿದ್ದಾಪುರ ಠಾಣಾ ಅಧಿಕಾರಿ ಮಂಜುನಾಥ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 4
Wow Wow 0