ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಸಲುವಾಗಿ ಸಮಿತಿ ರಚನೆ

ಕುಶಾಲನಗರ: ಕುಶಾಲನಗರ ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವ ಸಲುವಾಗಿ ಸಮಿತಿ ರಚಿಸುವ ಸಲುವಾಗಿ ಕುಶಾಲನಗರ ಪುರಸಭೆಯಲ್ಲಿ ಅಧ್ಯಕ್ಷರಾದ ಜಯಲಕ್ಷ್ಮಿ ಚಂದ್ರುರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಮಿತಿ ಸಚಿಸಲು ಅನುಮೋದನೆ ನೀಡಲಾಯಿತು. ಈ ಸಂದರ್ಭ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಉಪಾಧ್ಯಕ್ಷರಾದ ಪುಟ್ಟಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುರೇಶ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಇಂಧುಧರ್, ಪಸುವೈಧ್ಯಾಧಿಕಾರಿಗಳಾದ ಡಾ.ಸಂಜೀವ್ ಕುಮಾರ್ ಶಿಂಧ್ಯ, ಆರೋಗ್ಯಾಧಿಕಾರಿ ಉದಯ್ ಕುಮಾರ್ ಇದ್ದರು.