ಆ.12 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ
ಮಡಿಕೇರಿ ಆ.05:-ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ 12 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿರಾಜಪೇಟೆಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂ.ಸಂ.08272-295297 ನ್ನು ಸಂಪರ್ಕಿಸಬಹುದು.
ಸಾರ್ವಜನಿಕರು, ಕರ್ತವ್ಯ ಲೋಪ ಮಾಡುವ ಸರ್ಕಾರಿ, ಸಾರ್ವಜನಿಕ ನೌಕರರ ವಿರುದ್ದ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲು ಈ ಅವಕಾಶವನ್ನು ಉಪಯೋಗ ಪಡಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
