ಸೆ.10 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ

ಸೆ.10 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ

ಮಡಿಕೇರಿ:-ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಸೆಪ್ಟೆಂಬರ್, 10 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆಯವರೆಗೆ ಕುಶಾಲನಗರದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಸಿದ್ದಾರೆ.