ರಾಷ್ಟ್ರೀಯ ಮಾನವ ಅಭಿವೃದ್ಧಿ ಫೌಂಡೇಶನ್ ಕೋರ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಂಪೂರ್ಣ ನಿರುದ್ಯೋಗ ನಿರ್ಮೂಲನಾ ಕಾರ್ಯಕ್ರಮ

Apr 9, 2026 - 16:42
 0  58
ರಾಷ್ಟ್ರೀಯ ಮಾನವ ಅಭಿವೃದ್ಧಿ ಫೌಂಡೇಶನ್ ಕೋರ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಂಪೂರ್ಣ ನಿರುದ್ಯೋಗ ನಿರ್ಮೂಲನಾ ಕಾರ್ಯಕ್ರಮ

ಮಡಿಕೇರಿ: ರಾಷ್ಟ್ರೀಯ ಮಾನವ ಅಭಿವೃದ್ಧಿ ಫೌಂಡೇಶನ್ ಕೋರ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಜ್ಯ ಮತ್ತು ದೇಶದ ಯುವ ಜನರ ಮುಂದಿನ ಉಜ್ವಲ ಭವಿಷ್ಯ ನಿರ್ಮಾಣದ ದೃಷ್ಟಿಯಿಂದ ಸಂಪೂರ್ಣ ನಿರುದ್ಯೋಗ ನಿರ್ಮೂಲನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಪ್ರೊ.ಪಿ.ಎಂ.ಪದ್ಮನಾಭ ತಿಳಿಸಿದ್ದಾರೆ.

 ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ಅಭಿವೃದ್ಧಿ ಯೋಜನೆಗಳಲ್ಲಿ ನಿರುದ್ಯೋಗ ನಿರ್ಮೂಲನಾ ಯೋಜನೆಯು ಕೂಡಾ ಒಂದಾಗಿದೆ. ನಿರುದ್ಯೋಗ ನಿರ್ಮೂಲನಾ ಯೋಜನೆಯನ್ನು ಅತ್ಯಂತ ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಸಂಪೂರ್ಣ ನಿರುದ್ಯೋಗ ನಿರ್ಮೂಲನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಸಂಸ್ಥೆಯ ವತಿಯಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಂಪೂರ್ಣ ನಿರುದ್ಯೋಗ ಮುಕ್ತ ಭಾರತ ಕಾರ್ಯಕ್ರಮವನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದ ಅಡಿಯಲ್ಲಿ ಕೃಷಿ ವಾಣಿಜ್ಯ ಮತ್ತು ವ್ಯವಹಾರ, ದೇಶದ ಸುಭದ್ರ ನಿರ್ಮಾಣದ ಅಡಿಪಾಯ ಪ್ರವಾಸೋದ್ಯಮ ಹಾಗೂ ನೀತಿ ಬದ್ಧವಾದ ಚಲನಚಿತ್ರ ನಿರ್ಮಾಣ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

 ಮೇ ತಿಂಗಳಲ್ಲಿ ವಿದ್ಯಾರ್ಥಿಗಳಿಗೆ ಎಂಎಲ್‌ಎ, ಎಂಪಿ ಹಾಗೂ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ಮಾನವ ಅಭಿವೃದ್ಧಿ ಫೌಂಡೇಶನ್ ಕೋರ್ಸ್ ಚಾರಿಟೇಬಲ್ ಟ್ರಸ್ಟ್‌ನ ಪ್ರಮುಖರಾದ ಸುರೇಶ್, ಕುಟ್ಟಪ್ಪ, ಮುಖೇಶ್, ದಿಲೀಪ್ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0