2.3 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ

Jul 5, 2026 - 18:08
 0  342
2.3 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ

ಕುಶಾಲನಗರ,ಜು೫: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದ ಬಸವೇಶ್ವರ ಬಡಾವಣೆಯಲ್ಲಿ ನೂತನವಾಗಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಸಲಾಯಿತು. ಪಂಚಾಯಿತಿ ನಿಧಿ ಹಾಗೂ 16ನೇ ಹಣಕಾಸಿನ ಅನುದಾನವನ್ನು ಬಳಸಿ ೨.೩ ಲಕ್ಷ ರೂ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗಿದೆ.‌

ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಲು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಬಿ. ಶಂಶುದ್ಧೀನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ, ಗುತ್ತಿಗೆದಾರರಿಗೆ ನಿಯಮಾನುಸಾರವಾಗಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳುವಂತೆ ತಿಳಿಸಿದರು.

 ಸ್ಥಳೀಯರಾದ ನವೀನ್ ಮಾತನಾಡಿ, ಬಸವೇಶ್ವರ ಬಡಾವಣೆಯಲ್ಲಿ ಬಹಳಷ್ಟು ವರ್ಷಗಳಿಂದ ರಸ್ತೆಯಿಲ್ಲದೇ ತೊಂದರೆಯಾಗುತ್ತಿತ್ತು. ಮಳೆಗಾಲದಲ್ಲಿ ಮಳೆಯಿಂದ ರಸ್ತೆ ಹದಗೆಟ್ಟು ವಾಹನಗಳಲ್ಲಿ ಸಂಚರಿಸಲು ಸಾಧ್ಯವಾಗುತ್ತಿರಲಿಲ್ಲ. ಶಾಲಾ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಸಾಧ್ಯವಾಗುತ್ತಿರಲಿಲ್ಲ. ವಾರ್ಡ್ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಜನರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ, ಪಂಚಾಯಿತಿ ಅನುದಾನವನ್ನು ಹಾಕಿ ರಸ್ತೆ ನಿರ್ಮಾಣ‌ ಮಾಡಿಕೊಟ್ಟಿದ್ದಾರೆ.‌

 ಗ್ರಾಮಸ್ಥರ ಪರವಾಗಿ ಅವರಿಗೆ ಧನ್ಯವಾದಗಳು ಎಂದರು. ಈ ಸಂದರ್ಭ ಮಾತನಾಡಿದ ಗ್ರಾ.ಪಂ ಮಾಜಿ ಸದಸ್ಯ ಕೆ.ಬಿ.ಶಂಶುದ್ಧೀನ್, ೧೬ ನೇ ಹಣಕಾಸಿ ಹಾಗೂ ಪಂಚಾಯಿತಿ ನಿಧಿ ಬಳಸಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿಲಾಗಿದೆ. ಹಲವು ವರ್ಷಗಳಿಂದ ರಸ್ತೆಯಿಲ್ಲದೇ ಸಾರ್ವಜನಿರಕರಿಗೆ ತೊಂದರೆಯಾಗುತ್ತಿತ್ತು. ಇದೀಗ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರು ಸುಗಮವಾಗಿ ಸಂಚಾರಿಸಲು ಅವಕಾಶ ಮಾಡಿಕೊಡಲಾಗಿದೆ ಎಂದರು. ಈ ಸಂದರ್ಭ ಸ್ಥಳೀಯರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0