ಪುಡಿಯೋಡಿ ದೇವಸ್ಥಾನಕ್ಕೆ ತೆರಳುವ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣ

ನಾಪೋಕ್ಲು:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಕುಂಜಿಲ-ಕಕ್ಕಬೆ ಪಂಚಾಯಿತಿ ವ್ಯಾಪ್ತಿಯ ಪುಡಿಯೋಡಿ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ. ಇಲ್ಲಿಯ ಇಗ್ಗುತಪ್ಪ ದೇವಸ್ಥಾನ ಬಳಿಯ ಸದ್ರಿ ರಸ್ತೆಗೆ ಈ ಹಿಂದೆ ಭೇಟಿ ನೀಡಿದ ಸಂದರ್ಭ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಸದ್ರಿ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವ ಭರವಸೆಯನ್ನು ನೀಡಿದ್ದರು.ಅದರಂತೆ ಈ ರಸ್ತೆಯ ಕಾಂಕ್ರೀಟೀಕರಣಕ್ಕೆ 5 ಲಕ್ಷವನ್ನು ಬಿಡುಗಡೆ ಮಾಡಿದ್ದರು.
ಈಗ ಕಾಮಗಾರಿ ಗುಣಮಟ್ಟದಲ್ಲಿ ಪೂರ್ಣಗೊಂಡಿದ್ದು ಸದ್ಯದಲ್ಲೇ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆ ಗೊಳ್ಳಲಿದೆ. ಇದಕ್ಕೆ ಸಹಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್, ಕೆಡಿಪಿ ಸದಸ್ಯರಾದ ಬಾಚಮಾಂಡ ಲವ ಚಿಣ್ಣಪ್ಪ, ಕಕ್ಕಬೆ ಪಂಚಾಯಿತಿ ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ ಮತ್ತು ಪ್ರಮುಖರಿಗೆ ಸ್ಥಳೀಯರು ಧನ್ಯವಾದ ಅರ್ಪಿಸಿದ್ದಾರೆ.