ವಿರಾಜಪೇಟೆ ಕೀರ್ತಿ ಬಡಾವಣೆಯಲ್ಲಿ 20 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಉದ್ಘಾಟನೆ

Jun 27, 2026 - 13:00
 0  327
ವಿರಾಜಪೇಟೆ ಕೀರ್ತಿ ಬಡಾವಣೆಯಲ್ಲಿ 20 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಉದ್ಘಾಟನೆ

ವಿರಾಜಪೇಟೆ, ಜೂ. 26: ಪುರಸಭೆ ವ್ಯಾಪ್ತಿಯ ಕೀರ್ತಿ ಬಡಾವಣೆಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೇಟಿ ನೀಡಿ, ಶಾಸಕರ ಅನುದಾನ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕರು, "ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿದೆ. ಜನರ ಬೇಡಿಕೆಗಳಿಗೆ ಆದ್ಯತೆ ನೀಡಿ ಸಮಸ್ಯೆ ಪರಿಹರಿಸಲು ನಾನು ಸದಾ ಬದ್ಧನಾಗಿದ್ದೇನೆ" ಎಂದರು.

 ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಮಾಜಿ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಸದಸ್ಯರಾದ ರಾಜೇಶ್ ಪದ್ಮನಾಭ, ಶಬರಿಷ್, ರಜಿನಿಕಾಂತ್, ಜಲೀಲ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲ್ಲೂಕು ಅಧ್ಯಕ್ಷ ರಫೀಕ್, ಮುಖಂಡರಾದ ಚೆಕ್ಕು, ಕುಂಡಚ್ಚಿರ ಮಂಜು ದೇವಯ್ಯ, ಬಟ್ಟಕಾಳಂಡ ರಾಜ, ಮಂಜುನಾಥ್, ಅನಿಲ್, ಅಯೂಬ್, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಸ್ಥಳೀಯ ಪ್ರಮುಖ ಮಿಟ್ಟು ಸೇರಿದಂತೆ ಹಲವರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0