ಕ್ರೀಡಾಕೂಟ ಆಯೋಜನೆಯೊಂದಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಿ:ಡಾ ಮಂತರ್ ಗೌಡ ಸಲಹೆ : ಕ್ರೀಡಾಕೂಟದ ಯಶಸ್ವಿ ಹಿನ್ನಲೆ ಶಾಸಕರಿಗೆ ಗೌರವ ಸಮರ್ಪಣೆ
admincoorgdaily

ಮಡಿಕೇರಿ:ಇತ್ತೀಚೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಜರುಗಿದ ಬಿಲ್ಲವ ಸಮಾಜದ ಸ್ಕೋರ್ಪಿನ್ ಪ್ರೀಮಿಯರ್ ಲೀಗ್ ಸೀಸನ್ 1 ಕ್ರಿಕೆಟ್ ಟೂರ್ನಮೆಂಟ್ ಅತ್ಯಂತ ಯಶಸ್ವಿಯಾಗಿ ನಡೆದ ಹಿನ್ನಲೆಯಲ್ಲಿ ಆಯೋಜಕರು ಟೂರ್ನಮೆಂಟ್ ಗೆ ಸಂಪೂರ್ಣ ಸಹಕಾರ ನೀಡಿದ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
ಇಂದು ಶಾಸಕರ ಗೃಹ ಕಛೇರಿಗೆ ತೆರಳಿದ ಕ್ರೀಡಾಕೂಟದ ಆಯೋಜಕರು ಶಾಸಕರನ್ನು ಅವರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿ ಸನ್ಮಾನಿಸುವ ಮೂಲಕ ಗೌರವಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಡಾ ಮಂತರ್ ಗೌಡರವರು ಯುವ ಸಮೂಹ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ತೋರುವುದರಿಂದ ಸ್ವಾಸ್ಥ್ಯ ಸಮಾಜದ ನಿರ್ಮಾಣವಾಗುತ್ತದೆ.ಹಾಗಾಗಿ ಎಲ್ಲಾ ಕ್ರೀಡಾಕೂಟಗಳಿಗೆ ತಮ್ಮ ಸಹಕಾರ ಇರುತ್ತದೆ ಎಂದು ತಿಳಿಸಿದರು.
ಕ್ರೀಡೆಯೊಂದಿಗೆ ಸಮಾಜದ ಒಳಿತಿಗಾಗಿ ಸಂಘ ಸಂಸ್ಥೆಗಳು ಉಚಿತ ಆರೋಗ್ಯ ತಪಾಸಣೆ ಶಿಬಿರಗಳ ಆಯೋಜನೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.