ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ:ಪಕ್ಷದ ಕಾರ್ಯಕ್ರಮಗಳನ್ನು ಪ್ರಚಾರ ಪಡಿಸಲು ಕಾರ್ಯರ್ತರಿಗೆ ಕರೆ ನೀಡಿದ ವಿನಯ್ ಕುಮಾರ್ ಸೊರಕೆ

ಮಡಿಕೇರಿ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ ರವರು ಕೊಡಗು ಜಿಲ್ಲೆಗೆ ಆಗಮಿಸಿ, ಪ್ರಚಾರ ಸಮಿತಿಯ ಜಿಲ್ಲಾಮಟ್ಟದ ಸಭೆಯಲ್ಲಿ ಭಾಗವಹಿಸಿದರು. ಸಭೆಯ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಟಿ.ಪಿ ರಮೇಶ್ ರವರು ವಹಿಸಿದರು.
ಈ ಸಂದರ್ಭ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು,ಸರಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಬಗ್ಗೆ ಹಾಗೂ ಯೋಜನೆಯ ಬಗ್ಗೆ ಜನಸಾಮಾನ್ಯರು ನೀಡುತ್ತಿರುವ ಉತ್ತಮ ಪ್ರತಿಕ್ರಿಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಯ ಯಶಸ್ಸು ಹಾಗೂ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು, ಅದರಲ್ಲೂ ವಿಶೇಷವಾಗಿ ಪ್ರಚಾರ ಸಮಿತಿಯ ಪದಾಧಿಕಾರಿಗಳು ಯಾವ ರೀತಿಯಾಗಿ ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು ಎಂದರು.
ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ಲೋಬೊ, ಉಪಾಧ್ಯಕ್ಷರಾದ ಮುನೀರ್, ಕೆಪಿಸಿಸಿ ಸಂಯೋಜಕರಾದ ಫಾರೂಕ್ ಮುಖ್ಯ, ಸಂಯೋಜಕರಾದ ಜಾನ್, ಮಂಗಳೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಡೆನ್ನಿಸ್, ಮಂಗಳೂರು ಕೆಪಿಸಿಸಿ ಸಂಯೋಜಕರಾದ ಡಾ.ನಿಶ್ಚಲ್ ದಂಬೆಕೋಡಿ, ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಹಂಸ ಮತ್ತು ,ಇಸ್ಮಾಯಿಲ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್ ಐ ಮುನೀರ್ ಅಹ್ಮದ್ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ,ಇನ್ನಿತರರರು ಉಪಸ್ಥಿತರಿದ್ದರು.