ವಿರಾಜಪೇಟೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಸಭೆ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ‌ಎ ಹನೀಫ್ ಅವರ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿದ ಮುಖಂಡರು

ವಿರಾಜಪೇಟೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಸಭೆ:  ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ‌ಎ ಹನೀಫ್ ಅವರ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿದ ಮುಖಂಡರು

ವಿರಾಜಪೇಟೆ:ಕೊಡಗು ಜಿಲ್ಲಾ‌ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಲ್ಲಿ ಇದೀಗ ಅಸಮಾಧಾನ ಭುಗಿಲೆದಿದ್ದು, ಶನಿವಾರ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಪಿ.ಎ ಹನೀಫ್ ನೇತ್ರತ್ವದಲ್ಲಿ ಮಡಿಕೇರಿಯಲ್ಲಿ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಗಿತ್ತು.ಇದೀಗ ಅಲ್ಪಸಂಖ್ಯಾತ ಘಟಕದ ಮತ್ತೊಂದು ಬಣ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎಂ.ಹೆಚ್ ಅಬ್ದುಲ್ ರೆಹಮಾನ್ ರವರ ನೇತೃತ್ವದಲ್ಲಿ ವಿರಾಜಪೇಟೆಯ ಪುರಭವನದಲ್ಲಿ ಕೊಡಗು ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ನಾಯಕರು ಮತ್ತು ಕಾರ್ಯಕರ್ತರು ಶನಿವಾರ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯವನ್ನು ವಿರೋಧಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷರ ಕಾರ್ಯವೈಖರಿಯನ್ನು ಖಂಡಿಸುವುದರೊಂದಿಗೆ ಏಕಪಕ್ಷೀಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದರು. ಅಧ್ಯಕ್ಷರ ಕಾರ್ಯ ಚಟುವಟಿಕೆ ಇದೇ ರೀತಿ ಮುಂದುವರಿದಲ್ಲಿ ವರಿಷ್ಠರಿಗೆ ದೂರು ನೀಡಲು ಅಭಿಪ್ರಾಯಗಳು ಕೇಳಿ ಬಂತು. ಸುದೀರ್ಘ ಚರ್ಚೆಯೊಂದಿಗೆ ಜಿಲ್ಲೆಯ ಅಲ್ಪಸಂಖ್ಯಾತರಲ್ಲಿ ಒಡಕು ಮೂಡಿಸುವ ಈ ರೀತಿ ಸಭೆಗಳನ್ನು ನಡೆಸಲು ಜಿಲ್ಲಾ ಕಾಂಗ್ರೆಸ್ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರ.ಸಭೆಯಲ್ಲಿ ಆಕಾಂಕ್ಷಿಗಳ ಅಭಿಪ್ರಾಯವನ್ನು ತಿಳಿಸಲು ಹೇಳಿದಾಗ ಎಡಪಾಲ ಶಾಫಿ ಅವರನ್ನು ಹೊರತುಪಡಿಸಿದರೆ ಇನ್ನಿತರ ಯಾವುದೇ ಕಾರ್ಯಕರ್ತರು ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಅಲ್ಲ ಎಂದು ಸಭೆಯಲ್ಲಿ ಅಭಿಪ್ರಾಯ ಮಂಡಿಸಿದರು.

ಸಭೆಯಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾದ ಆರ್ ಕೆ ಸಲಾಂ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್ ಐ ಮುನಿರ್ ಅಹ್ಮದ್, ವಿರಾಜಪೇಟೆ ಪುರಸಭೆ ಸದಸ್ಯ ಎಸ್ ಹೆಚ್ ಮತೀನ್, ಮಹಮ್ಮದ್ ರಾಫಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾದ ಅಬ್ದುಲ್ ಶುಕೂರ್, ಬಶೀರ್, ಮೊಯ್ದು ಗುಂಡಿಗೆರೆ, ಎ ಕೆ ಹಕೀಮ್ ನೆಲ್ಲಿಹುದಿಕೇರಿ,ವಿರಾಜಪೇಟೆ ಬ್ಲಾಕ್ ಅಲ್ಪಸಂಖ್ಯಾತರ ಉಪಾಧ್ಯಕ್ಷ ಹಬೀಬುಲ್ಲಾಣ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಎಜಾಜ್ ಅಹ್ಮದ್, ಪ್ರಮುಖರಾದ ಬಶೀರ್ ಎಡಪಲ, ಶೌಕತ್ ಕುಂಜಿಲ, ನಯಾಜ್ ವಿರಾಜಪೇಟೆ, ಶಫಿಕ್ ಅಹಮ್ಮದ್,ಆಲಿರ ಪವಿಲ್ ಮಡಿಕೇರಿ ಬ್ಲಾಕ್ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿಯಾದ ರವೂಫ್ ನುಸ್ರತ್,, ಮಡಿಕೇರಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಫಾರೂಕ್, ವಾಕ್ಬ್ ಬೋರ್ಡ್ ಮಾಜಿ ಉಪಾಧ್ಯಕ್ಷರಾದ ಕಾವು ಕೊಡಿಗೆ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಯ್ಯುಬ್, ಸುಂಟಿಕೊಪ್ಪದ ಪ್ರಮುಖರಾದ ಇಸಖ್ ಖಾನ್, ಮ ಶರೀಫ್, ಜಿಲ್ಲಾ ಅಲ್ಪಸಂಖ್ಯಾತರ ಘಟಕ ಮಾಜಿ ಅಧ್ಯಕ್ಷರಾದ ಹಾರೀಸ್ ಎ.ಕೆ, ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಉಸ್ಮಾನ್ ಸುಂಟಿಕೂಪ್ಪ, ವಿವಿಧ ಗ್ರಾಮ ಪಂಚಾಯತಿಯ ಸದಸ್ಯರುಗಳಾದ ಸೈಯದ್ ಅಲುವಿ, ಇಸ್ಮಾಯಿಲ್, ಝುಬೇರ್,ಮೊಹಮ್ಮದ್ ಎಡಪಾಲ, ಮೊಹಮ್ಮದ್ ನಾಪೋಕ್ಲು, ಹನೀಫ್ ಮೇಕೇರಿ ಸುಂಟಿಕೂಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕರೀಂ,ಸುಂಟಿಕೊಪ್ಪ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷರಾದ ಅಜೀಜ್‌, 60 ಕ್ಕೂ ಹೆಚ್ಚು ಮಂದಿ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ನಡೆದ ವಿಚಾರವನ್ನು ಜಿಲ್ಲೆಯ ಎರಡು ಶಾಸಕರಿಗೆ ಜಿಲ್ಲಾ ಅಧ್ಯಕ್ಷರಿಗೆ, ಕಾಂಗ್ರೆಸ್ ಹೈಕಮಾಂಡ್ ಗೆ ಪ್ರಸ್ತುತ ಬೆಳವಣಿಗೆಯನ್ನು , ಅಬ್ದುಲ್ ರೆಹಮಾನ್ ರವರಿಗೆ ಹೊಣೆಗಾರಿಕೆಯನ್ನು ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.