ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವಲ್ಲಿ ವಿಫಲ:ಬಿಜೆಪಿ ಜಿಲ್ಲಾ ವಕ್ತಾರ ತಳೂರು ಕಿಶೋರ್ ಕುಮಾರ್
ಮಡಿಕೇರಿ: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ತಳೂರು ಕಿಶೋರ್ ಕುಮಾರ್ ಆರೋಪಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ೧೦ ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಿತ್ತು. ಅದರಂತೆ ಇಷ್ಟು ದಿನ ೧೦ ಕೆಜಿ ಅಕ್ಕಿ ನೀಡಿತ್ತು. ಆದರೆ, ಪ್ರಸ್ತುತ ೧೦ ಕೆಜಿ ಅಕ್ಕಿ ಸ್ಥಗಿತಗೊಳಿಸಿದೆ.
ಕೇಂದ್ರ ಸರ್ಕಾರ ನೀಡುತ್ತಿರುವ ೫ ಕೆಜಿ ಜತೆಗೆ ರಾಜ್ಯ ಸರ್ಕಾರದ ಬೇಳೆ, ಅಡುಗೆ ಎಣ್ಣೆ, ಉಪ್ಪು ನೀಡುವುದಾಗಿ ಹೇಳುತ್ತಿದೆ. ತನ್ನ ಪ್ರಾಣಾಳಿಕೆಯಲ್ಲಿ ನುಡಿದಂತೆ ನಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಇದರೊಂದಿಗೆ ಶಾಲಾ ಶಿಕ್ಷಕರನ್ನು ಸಮೀಕ್ಷೆ ಹೆಸರಿನಲ್ಲಿ ಬಲಿಪಶು ಮಾಡುತ್ತಿದೆ ಎಂದು ಆರೋಪಿಸಿದ ಅವರು, ಅಭಿವೃದ್ಧಿಯಲ್ಲಿ ರಾಜ್ಯ ಸರ್ಕಾರ ವಿಫಲಗೊಂಡಿದೆ.
ಮಡಿಕೇರಿ ತಲಕಾವೇರಿ ರಸ್ತೆಗಳು ಗುಂಡಿಬಿದ್ದು ಸಂಚಾರ ಯೋಗ್ಯವಾಗಿಲ್ಲ. ಇದರ ನಡುವೆ ಗುಂಡಿಬಿದ್ದ ರಸ್ತೆಗೆ ಮಣ್ಣು ಹಾಕಿ ದುರಸ್ತಿಗೊಳಿಸಲಾಗುತ್ತಿದೆ. ಒಟ್ಟಿನಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ವಿಫಲಗೊಂಡಿದೆ ಎಂದು ದೂರಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮನು ಮಂಜುನಾಥ್, ಬಿಜೆಪಿ ಮುಖಂಡರಾದ ಎಂ.ಪಿ.ಬಾಲಕೃಷ್ಣ, ಕೂಪದಿರ ದೊರೆ ಮಾದಪ್ಪ,, ಎಂ.ಜೆ.ಅನುದೀಪ್ ಇದ್ದರು.