ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿದ್ದು, ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು;ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ
admincoorgdaily

ಮಡಿಕೇರಿ: ವಿಬಿ ಜಿ ರಾಮ್ ಜಿ ಕಾಯ್ದೆ ಕಾರ್ಯಕ್ರಮ ಜನಪರವಾಗಿದೆ. ಆದರೆ, ಕಾಂಗ್ರೆಸ್ ಮಾತ್ರ ಅಪಪ್ರಚಾರದಲ್ಲಿ ತೊಡಗಿದ್ದು, ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು
. ವಿಬಿ-ಜಿ-ರಾಮ್-ಜಿ ಯೋಜನೆ ಉತ್ತಮ ಯೋಜನೆಯಾಗಿದೆ. ಆದರೆ, ಜಾರಿಯಾಗಿರುವುದನ್ನು ಸಹಿಸದ ಕಾಂಗ್ರೆಸ್ ನಾಯಕರು ಸುಳ್ಳು ವದಂತಿಗಳನ್ನು ಹರಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಮನರೇಗಾ ಯೋಜನೆಯಲ್ಲಿದ್ದ ನ್ಯೂನತೆಗಳನ್ನು ಸರಿಪಡಿಸಿ ಹೊಸ ರೂಪ ನೀಡಲಾಗಿದೆ. ಯೋಜನೆಯಲ್ಲಿ ಶೇ.೬೦ ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ಒದಗಿಸಿದರೇ ಶೇ.೪೦ರಷ್ಟನ್ನು ರಾಜ್ಯ ಸರ್ಕಾರಗಳು ಒದಗಿಸಬೇಕಾಗಿದೆ ಎಂದರು.
ವಿಬಿ ಜಿ ರಾಮ್ ಜಿ ಕಾಯ್ದೆಗೆ ಸಂಸತ್ ಸದನಗಳಲ್ಲಿ ಒಪ್ಪಿಗೆ ಸಿಕ್ಕಿದೆ. ಯೋಜನೆಗೆ ಕಾಯಕಲ್ಪ ನೀಡಲಾಗಿದ್ದು, ವಿಕಸಿತ ಭಾರತಕ್ಕೆ ಉತ್ತಮ ಯೋಜನೆ ಎಂದರು.
ವೇದಿಕೆಯಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ.ಬಿ.ಸಿ.ನವೀನ್, ಮಾಜಿ ಸಭಾಪತಿ ಕೆ.ಜಿ.ಬೋಪಯ್ಯ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಬಿಜೆಪಿ ಜಿಲ್ಲಾ ಅಧ್ಯಕ್ಷ ನಾಪಂಡ ರವಿಕಾಳಪ್ಪ ಇತರರು ಇದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.