ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಸ್ವಾಗತ ಕೋರಿದ ಕಾಂಗ್ರೆಸ್ ಮುಖಂಡರು

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಸ್ವಾಗತ ಕೋರಿದ ಕಾಂಗ್ರೆಸ್ ಮುಖಂಡರು ಮಡಿಕೇರಿ:ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು,ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಸ್ವಾಗತ ಕೋರಲಾಯಿತು.
ಈ ಸಂದರ್ಭ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೋಜ್ ಖಾನ್ ಕೂಡ ಇದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮೂಡಾ ಅಧ್ಯಕ್ಷ ಬಿ. ವೈ. ರಾಜೇಶ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ದಿನೇಶ್ ಕೆ ಆರ್ ಪ್ರಮುಖರಾದ ಮುನೀರ್ ಅಹಮದ್, ನವೀನ್ ಅಂಬೇಕಲ್, ಹೆಚ್. ಎಂ. ನಂದ ಕುಮಾರ್, ಕವನ್ ಕೊತ್ತೋಳಿ, ಅರ್ಜುನ್ ಟಿ ಆರ್, ಚಂದ್ರ ಶೇಖರ್ ಆರ್ ಪಿ. ಸೇರಿದಂತೆ ಕಾರ್ಮಿಕ ಘಟಕದ ಉಪಾಧ್ಯಕ್ಷರಾದ ಮಿರ್ಷಾದ್ ಪರವಂಡ, ಸಲೀಮ್ ಜಾವೇದ್, ಆದಮ್, ಮುನ್ನಝ್ರ್ ಅನೇಕರು ಸಚಿವರಿಗೆ ಸ್ವಾಗತ ಕೋರಿದರು.