ಕಾಟಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಮಡಿಕೇರಿ:ತಾಲ್ಲೂಕಿನ ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟಕೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಕೆಪಿಸಿಸಿ, ಡಿಸಿಸಿ ಹಾಗೂ ಬ್ಲಾಕ್ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾಮ ನಿರ್ದೇಶಕಿತ ಅಧ್ಯಕ್ಷರು/ಪದಾಧಿಕಾರಿಗಳು, ಮೇಕೇರಿ, ಹಾಕತೂರು, ಪೆರಾಜೆ, ಚೆಂಬು, ಸಂಪಾಜೆ, ಮದೆನಾಡು, ಚೇರಂಬಾಣೆ, ಭಾಗಮಂಡಲ, ಕುಂದಚೇರಿ, ಕರಿಕೆ ಹಾಗೂ ಸುತ್ತಮುತ್ತಲಿನ ವಲಯಗಳ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.