ಸೋಮವಾರಪೇಟೆ ನಗರ ಕಾಂಗ್ರೆಸ್ ವತಿಯಿಂದ ಸಂವಿಧಾನ ದಿನಾಚರಣೆ

Nov 26, 2025 - 12:47
 0  162
ಸೋಮವಾರಪೇಟೆ ನಗರ ಕಾಂಗ್ರೆಸ್ ವತಿಯಿಂದ ಸಂವಿಧಾನ ದಿನಾಚರಣೆ

ಸೋಮವಾರಪೇಟೆ:ಭಾರತ ಸಂವಿಧಾನ ಅಂಗೀಕಾರ ದಿನಾಚರಣೆಯನ್ನು ಸೋಮವಾರಪೇಟೆ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರಪೇಟೆಯ ಬ್ಲಾಕ್ ಕಾಂಗ್ರೆಸ್ ಸಮಿತಿ ಕಛೇರಿಯಲ್ಲಿ ಆಚರಣೆ ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ ಬಿ ಸತೀಶ್ ರವರು ಮಾತನಾಡಿ 1949 ಇಸವಿಯ ನವೆಂಬರ್ 26 ತಾರೀಕು ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿರುವ ಸಂವಿಧಾನ ವಿಶ್ವಕ್ಕೆ ಶ್ರೇಷ್ಠವಾಗಿದೆ. ಬಾಬಾ ಸಾಹೇಬ್ ಡಾ ಅಂಬೇಡ್ಕರ್ ರವರು ನಮಗೆ ನೀಡಿದಂತಹ ಸಂವಿಧಾನ ಸರ್ವರಿಗೂ ಸಮಪಾಲು ಸಮಬಾಳು ತತ್ವದಲ್ಲಿರುವ ನಮ್ಮ ಸಂವಿಧಾನ ಸಾಂವಿಧಾನಿಕ ಶ್ರೇಷ್ಠತೆಯನ್ನು ಹೊಂದಿದೆ ಎಂದು ತಿಳಿಸಿದರು.

 ಈ ಸಭೆಯಲ್ಲಿ ಸಂವಿಧಾನ ಪೀಠಿಕೆಯನ್ನು ಭೋದನೆ ಮಾಡಲಾಯಿತು.

 ಈ ಸಂದರ್ಭದಲ್ಲಿ ಸೋಮವಾರಪೇಟೆ ಬ್ಲಾಕ್ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಫಿ ಭೇಟು,ನಗರ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಮನ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿ ಎ ಲಾರೆನ್ಸ್, ಮಹಿಳಾ ಕಾಂಗ್ರೆಸ್ ಪ್ರಮುಖರಾದ ಶೋಭಾ,ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಸುನಿಲ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವಕ್ತಾರ ಅಬ್ದುಲ್ ರಜಾಕ್ ಕೆ ಎ, ಯುವ ಕಾಂಗ್ರೆಸ್ ಪ್ರಮುಖರಾದ ಸುಹಾಸ್ ಜಿ ಆರ್, ಸುಚೇತನ್ ಸ್ವರೂಪ್ , ಸಾಗರ್ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0