Kodagu

ಎಡಪಾಲ ಭಾಗದಲ್ಲಿ ನಿರಂತರ ಕಾಡಾನೆ ದಾಳಿ: ಸಂಕೇತ್ ಪೂವಯ್ಯ ಭೇಟಿ‌

admincoorgdaily

ಕಡಂಗ:ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಪಾಲ ಗ್ರಾಮದ ಎರೆಟೇಂಡ ಭಾಗದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಾವಳಿಯಿಂದ ತೋಟಗಳಿಗೆ ಹಾನಿಯಾಗಿದ್ದು ಇಂದು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ನವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. .ಅರಣ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಅವರು ಕೂಡಲೇ ಆನೆಗಳನ್ನು ಕಾಡಿಗಟ್ಟಿಸಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಕೋಡಿರ ವಿನೋದ್ ನಾಣಯ್ಯ, ಗ್ರಾಮ ಪಂಚಾಯತಿ ಸದಸ್ಯರಾದ ಸುಬೀರ್ ಸಿಇ, ಮಹಮ್ಮದ್ ಎಡಪಾಲ , ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶಾಫಿ, ಜಕ್ರಿಯ, ಶರೀಫ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:ನೌಫಲ್