ಸಹಕಾರ ಸಂಘಗಳು ರೈತರ ಹಾಗೂ ನಾಡಿನ ಆರ್ಥಿಕ ಅಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡುತ್ತಿದೆ: ಶಾಸಕ ಎಎಸ್ ಪೊನ್ನಣ್ಣ ಅಭಿಪ್ರಾಯ
ಗೋಣಿಕೊಪ್ಪ: ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಮತ್ತು ಪರಿವರ್ತನಾ ಸಹಕಾರ ಸಂಘ ನಿಯಮಿತ ಇದರ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಉದ್ಘಾಟಕರಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು.
ನೂತನ ವಿನ್ಯಾಸದೊಂದಿಗೆ ನಿರ್ಮಾಣವಾದ ಈ ಆಡಳಿತ ಕಟ್ಟಡದ ಲೋಕಾರ್ಪಣೆ ಬಳಿಕ ಮಾತನಾಡಿದ ಶಾಸಕರು, ಸಹಕಾರ ಸಂಘಗಳು ರೈತರ ಹಾಗೂ ನಾಡಿನ ಆರ್ಥಿಕ ಅಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡುವಂತಹುದು. ರೈತರ ಏಳಿಗೆ ಹಾಗೂ ಅವರ ಅಭಿವೃದ್ಧಿಗೆ ಸಹಕಾರ ಸಂಘಗಳು ಬಹುದೊಡ್ಡ ಕೊಡುಗೆ ನೀಡುತ್ತಿವೆ. ನೂತನ ಕಟ್ಟಡದಲ್ಲಿ, ಪ್ರಸ್ತುತ ಸಂಘವು ಮತ್ತಷ್ಟು ಯಶಸ್ಸನ್ನು ಕಾಣುತ್ತಾ ಲಾಭದೊಂದಿಗೆ ಈ ಭಾಗದ ಎಲ್ಲಾ ರೈತರ ಶ್ರೇಯೋಭಿವೃದ್ಧಿಗೆ ಕೊಡುಗೆ ನೀಡುವಂತಾಗಲಿ ಎಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಸಂಸದರಾದ ಯದುವೀರ್ ಒಡೆಯರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಾಂಡ್ ಗಣಪತಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾನಂಡ ಪೃಥ್ವಿ, ಬಾಳಲೆ ವಲಯ ಅಧ್ಯಕ್ಷರಾದ ಕೋದಂಡ ಸೋಮಣ್ಣ, ಬಾಳಲೆ ಪಂಚಾಯಿತಿ ಅಧ್ಯಕ್ಷರಾದ ಸ್ಮಿತಾ ಪೊನ್ನಪ್ಪ, ಬಾಳಲೆ ಪಂಚಾಯಿತಿಯ ಮಾಜಿ ಸದಸ್ಯರಾದ ವಿನು ಉತ್ತಪ್ಪ, ನಿಟ್ಟೂರು ವಲಯ ಅಧ್ಯಕ್ಷರಾದ ಪವನ್, ಪಂಚಾಯಿತಿ ಅಧ್ಯಕ್ಷರಾದ ಅಮುಣಿ, ಸದಸ್ಯರಾದ ಅಪ್ಪಣ್ಣ, ಪೊನ್ನಪ್ಪಸಂತೆ ವಲಯ ಅಧ್ಯಕ್ಷರಾದ ಚೆಟ್ಟಿಮಾಡ ರಾಬಿನ್ ಬೋಪಣ್ಣ, ತಾರಾ ಅಯ್ಯಮ್ಮ, ಚೋಂದಮ್ಮ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೋಮಣ್ಣ ಎಲ್ಲಾ ಆಹ್ವಾನಿತ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.