ಕೂಗ್೯ ಹೋಟೇಲ್ಸ್ , ರೆಸಾಟ್೯ ಅಸೋಸಿಯೇಷನ್ ವೆಬ್ ಸೈಟ್ ಲೋಕಾಪ೯ಣೆ: ಪರಿಸರ ಸ್ಮೇಹಿ ಪ್ರವಾಸೋದ್ಯಮಕ್ಕೆ ಒಗ್ಗಟ್ಟಿನಿಂದ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ
ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮಿಗಳು ಒಗ್ಗಟ್ಟಿನಿಂದ ಪರಿಸರ ಸ್ನೇಹಿಯಾದ ವಿನೂತನ ಯೋಜನೆ ಜಾರಿಗೆ ಮುಂದಾದರೆ ಖಂಡಿತವಾಗಿಯೂ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉಜ್ವಲ ಭವಿಷ್ಯವಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಪ್ರಾಯಪಟ್ಟಿದ್ದಾರೆ. ಕೊಡಗಿನ ನಿಸಗ೯ ಸಂಪತ್ತು, ಶ್ರೀಮಂತ ಸಂಸ್ಕೖತಿಯನ್ನೂ ಪ್ರವಾಸೋದ್ಯಮಿಗಳು ಸುರಕ್ಷಿತವಾಗಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿಯೂ ಗಮನ ನೀಡಬೇಕೆಂದು ಅವರು ಕಿವಿಮಾತು ಹೇಳಿದ್ದಾರೆ. ನಗರದ ಹೊರವಲಯದಲ್ಲಿನ ವೈಲ್ಡರ್ ನೆಸ್ ರೆಸಾಟ್೯ನಲ್ಲಿ ಕೂಗ್೯ ಹೋಟೇಲ್ಸ್ , ರೆಸಾಟ್೯ ಅಸೋಸಿಯೇಷನ್ ನ ನೂತನ ವೆಬ್ ಸೈಟ್, ಲಾಂಛನ ಅನಾವೋರಣಗೊಳಿಸಿ ಕಾಯ೯ಕ್ರಮ ಉದ್ಘಾಟಿಸಿ ಜಿಲ್ಲಾಧಿಕಾರಿ ಮಾತನಾಡಿದರು
. ಕುಶಾಲನಗರ - ಮಡಿಕೇರಿ ನಡುವಿನ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಖಾಸಗಿ ಜಾಗ ದೊರಕಿದರೆ, ಶೌಚಾಲ,ಯ ಮಿನಿ ರೆಸ್ಟೋರೆಂಟ್ ವ್ಯವಸ್ತೆ ಕಲ್ಪಿಸಲು ಸಕಾ೯ರದಿಂದ ಸಾಧ್ಯವಿದೆ. ಸದ್ಯದಲ್ಲಿಯೇ ಮೈಸೂರು - ಕುಶಾಲನಗರ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿ ುಕ್ತಾಯವಾದ ನಂತರ ಕುಶಾಲನಗರದಲ್ಲಿ ವಾಹನ ದಟ್ಟಣೆ ಇಳಿಮುಖವಾಗುವ ಸಾಧ್ಯತೆಯಿದೆ ಎಂದರಲ್ಲದೇ, ಮಡಿಕೇರಿಯಲ್ಲಿ ವಾಹನ ದಟ್ಟಣೆ ಮತ್ತು ವಾಹನ ನಿಲುಗಡೆ ಸಮಸ್ಯೆ ನಿವಾರಿಸಲು ಸೂಕ್ತ ಸ್ಥಳಗಳಲ್ಲಿ ಪ್ರವಾಸಿ ವಾಹನ ನಿಲುಗಡೆಗೊಳಿಸಿ ಅಂಥ ಸ್ಥಳದಿಂದ ಪ್ರವಾಸಿಗರನ್ನು ಪ್ರವಾಸಿ ಸಂಚಾರಿ ವಾಹನಗಳ ಮೂಲಕ ಪ್ರವಾಸೀ ತಾಣಗಳಿಗೆ ಕರೆದೊಯ್ಯುವ ಸೌಲಭ್ಯದತ್ತ ಚಿಂತನೆ ಹರಿಸಬೇಕಾಗಿದೆ ಎಂದು ಸಲಹೆ ನೀಡಿದರು.
ಮಡಿಕೇರಿಯ ಕಾವೇರಿ ಕಲಾಕ್ಷೇತ್ರವನ್ನು ನೆಲಸಮಗೊಳಿಸಿ ಅಲ್ಲಿ ಬಹುಮಹಡಿ ವಾಹನ ನಿಲುಗಡೆಗೆ ಯೋಜನೆ ರೂಪಿಸಲಾಗಿದೆ. ಅಂತೆಯೇ ಗಾಂದಿ ಮೈದಾನದಲ್ಲಿ ಸುಸಜ್ಜಿತ ರಂಗಮಂದಿರ ನಿಮಿ೯ಸಿ ಅಲ್ಲಿಯೂ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಯೋಜನೆ ರೂಪಿಸಲಾಗುತ್ತಿದೆ ಎಂದೂ ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಕೊಡಗಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ ಸಂಬಂದಿತ ಯಾವುದೇ ರೀತಿಯ ಸಲಹೆಗಳಿದ್ದರೂ ಜಿಲ್ಲಾಡಳಿತಕ್ಕೆ ನೀಡಿ ಎಂದು ಮನವಿ ಮಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿನ ಪ್ರವಾಸೋದ್ಯಮಿಗಳು ಪರಿಸರ ಸಂರಕ್ಷಣೆಯೊಂದಿಗೆ ಹೊಣೆಯರಿತ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು.ಕಳಪೆ ಗುಣಮಟ್ಟದ, ನಕಲಿ ಉತ್ಪನ್ನಗಳು ಕೊಡಗು ಹೆಸರಿನಲ್ಲಿ ಮಾರಾಟವಾಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಪ್ರತ್ಯೇಕವಾದ ಕೊಡಗು ಬ್ರಾಂಡ್ ಉತ್ಪನ್ನಗಳನ್ನು ತಯಾರಿಸಿ, ಮಾರಾಟ ಮಾಡುವ ನಿಟ್ಟಿನಲ್ಲಿಯೂ ಗಮನ ನೀಡಿ ಎಂದು ಸಲಹೆ ನೀಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಸಲಹೆ ನೀಡಿದರು.
ಕೂಗ್೯ ಹೋಟೇಲ್ಸ್ , ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಮಾತನಾಡಿ, ಭವಿಷ್ಯದಲ್ಲಿ ಕೊಡಗಿನಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ಸಂಬಂಧಿಸಿದಂತೆ ಸಾಕಷ್ಟು ನೂತನ ಯೋಜನೆ ರೂಪಿಸಲಾಗಿದೆ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಕಛೇರಿಯಲ್ಲಿ ತಮ್ಮ ಅಸೋಸಿಯೇಷನ್ ಗೆ ಕಛೇರಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ಅವಕಾಶ ನೀಡಿದ್ದಾರೆ ಎಂದರು. ರೆಸಾಟ್೯, ಹೋಟೇಲ್ ನವರು ಕೊಡಗಿನಲ್ಲಿ ಉದ್ಯಮ ವಹಿವಾಟು ನಡೆಸುವ ಸಂದಭ೯ ಸ್ಥಳೀಯರ ವಿಶ್ವಾಸ ಗಳಿಸುವುದು ಅತ್ಯಗತ್ಯ ಎಂದು ಕರೆ ನೀಡಿದ ದಿನೇಶ್ ಕಾಯ೯ಪ್ಪ, ಸ್ಥಳೀಯವಾಗಿ ಮೂಲಸೌಕಯ೯ ಅಭಿವೖದ್ದಿಗೆ ತಮ್ಮ ಸಿ.ಎಸ್.ಆರ್ ನಿಧಿಯ ಮೂಲಕ ರೆಸಾಟ್೯ಗಳು ಮುಂದಾಗುವುದು ಸೂಕ್ತ ಎಂದೂ ಸಲಹೆ ನೀಡಿದರು. ಧಾಮಿ೯ಕ ಯಾತ್ರಾ ಪ್ರವಾಸ, ಕಾಪಿ ಬ್ಲಾಸಂ ಪ್ರವಾಸೋದ್ಯಮ, ಹಾಕಿ ಟೂರಿಸಂ, ರ್ಯಾಲಿ ಟೂರಿಸಂ, ದಸರಾ ಟೂರಿಸಂ ಹೀಗೆ ಸಾಕಷ್ಟು ಅವಕಾಶಗಳು ಕೊಡಗಿನಲ್ಲಿ ಪ್ರವಾಸೋದ್ಯಮಕ್ಕಿದೆ ಎಂದೂ ದಿನೇಶ್ ಹೇಳಿದರು. ಸದ್ಯದಲ್ಲಿಯೇ ಕೊಡಗು ಪ್ರವಾಸಿ ಉತ್ಸವವನ್ನು ಮಡಿಕೇರಿಯಲ್ಲಿ ಆಯೋಜಿಸಲಾಗುತ್ತದೆ. ಅಂತೆಯೇ ಕೊಡಗಿನಲ್ಲಿ ಪ್ರತೀ ತಿಂಗಳೂ ಒಂದಲ್ಲ ಒಂದು ಪ್ರವಾಸೋದ್ಯಮ ಚಟುವಟಿಕೆಗಳನ್ನು ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುತ್ತದೆ ಎಂದೂ ದಿನೇಶ್ ಕಾಯ೯ಪ್ಪ ಮಾಹಿತಿ ನೀಡಿದರು.ಕೊಡಗಿನಲ್ಲಿ 1990 ರಲ್ಲಿ ಪ್ರಾರಂಭವಾದ ಹೊಟೇಲ್, ರೆಸ್ಟೋರೆಂಟ್ ಅಸೋಸಿಯೇಷನ್ ಗಣೇಶ್ ಅಯ್ಯಣ್ಣ, ಜೆ.ವಿ.ಕೋಟಿ, ಬಿ ಆರ್. ನಾಗೇಂದ್ರ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಸಾಗಿಬಂದಿದ್ದು, ಇದೀಗ ಕೂಗ್೯ ಹೊಟೇಲ್ಸ್, ರೆಸಾಟ್೯ ಅಸೋಸಿಯೇಷನ್ ಎಂದು ಹೆಸರು ಬದಲಿಸಲಾಗಿದೆ ಎಂದೂ ದಿನೇಶ್ ಮಾಹಿತಿ ನೀಡಿದರು.
ಪ್ರವಾಸೋದ್ಯಮಿ ಮತ್ತು ಸಂಘದ ಗೌರವ ಸಲಹೆಗಾರ ಜಿ. ಚಿದ್ವಿಲಾಸ್ ಮಾತನಾಡಿ, ಕುಶಾಲನಗರಕ್ಕೆ ರೈಲ್ನೇ ಮಾಗ೯ ಸಂಪಕ೯ ಯೋಜನೆ ದಶಕಗಳಿಂದ ವಿಳಂಭವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸಕಾ೯ರದೊಂದಿಗೆ ವ್ಯವಹರಿಸಬೇಕು ಎಂದರು ಕೊಡಗಿನಲ್ಲಿ ಹಲವಾರು ತಾಣಗಳಿದ್ದು ಇವುಗಳಿಗೆ ಕಾಯಕಲ್ಪ ನೀಡಿದ್ದಲ್ಲಿ, ಈಗಿರುವ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ದಟ್ಟಣೆ ಕಡಮೆಯಾಗಲು ಸಾಧ್ಯವಿದೆ ಎಂದೂ ಸಲಹೆ ನೀಡಿದರು. ಕೊಡಗು ಪ್ರವಾಸೋದ್ಯಮಕ್ಕೆ ಹತ್ತು ಹಲವಾರು ರೀತಿಯಲ್ಲಿ ಕಾಯಕಲ್ಪ ನೀಡುವ ಸಲಹೆಗನ್ನೂ ಚಿದ್ವಿಲಾಸ್ ಕಾಯ೯ಕ್ರಮದಲ್ಲಿ ಪ್ರಸ್ತುತ ಪಡಿಸಿದರು. ಪ್ರವಾಸೋದ್ಯಮಿ ಕೊಲ್ಲೀರ ಧಮ೯ಜ ಮಾತನಾಡಿ, ಫೋಟೋಗ್ರಫಿ ಟೂರಿಸಂಗೆ ದಕ್ಷಿಣ ಕೊಡಗಿನಲ್ಲಿ ಸಾಕಷ್ಟು ಅವಕಾಶವಿದೆ ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಗಮನ ಹರಿಸಬೇಕೆಂದು ಸಲಹೆ ನೀಡಿದರು. ನಾಗರಹೊಳೆಯಲ್ಲಿ ಸಫಾರಿ ವಾಹನಗಳು ಆಗಿಂದಾಗ್ಗೆ ದುರಸ್ಥಿಯಾಗುತ್ತಿದೆ. ದೂರದಿಂದ ಬರುವ ಪ್ರವಾಸಿಗರಿಗೆ ಇದರಿಂದ ಸಮಸ್ಯೆಯಾಗುತ್ತಿದೆ ಎಂದರು. ರಸ್ತೆಗಳು ತೀರಾ ಹದಗೆಟ್ಟಿದ್ದು ಈ ನಿಟ್ಟಿನಲ್ಲಿಯೂ ಗಮನ ನೀಡಬೇಕೆಂದು ಜಿಲ್ಲಾಧಿಕಾರಿಗಳನ್ನು ವಿನಂತಿಸಿದರು. ಪ್ರವಾಸೋದ್ಯಮಿ ಮೋಹನ್ ದಾಸ್ ಮಾತನಾಡಿ, ಪರಿಸರ ಸ್ನೇಹಿಯಾಗಿ ಕಾಫಿ ಪ್ರವಾಸೋದ್ಯಮವನ್ನು ಕೊಡಗಿನ ಕಾಫಿ ತೋಟಗಳಲ್ಲಿ ಪರಿಚಯಿಸಲು ಅವಕಾಶ ಇದೆ ಎಂದರು. ಪ್ರವಾಸೋದ್ಯಮಿ ಜಯಚಿಣ್ಣಪ್ಪ ಮಾತನಾಡಿ, ತ್ಯಾಜ್ಯ ವಿಲೇವಾರಿಗೆ ಮತ್ತಷ್ಟು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸುವಂತೆ ಕೋರಿದರು.
ಪ್ರವಾಸೋದ್ಯಮಿ ಜಗದೀಶ್ ಮಾತನಾಡಿ,ಗ್ರಾಮಪಂಚಾಯತ್ ಗಳಲ್ಲಿನ ತೆರಿಗೆ ದರದಲ್ಲಿ ಒಂದೊಂದು ಕಡೆ ಒಂದೊಂದು ದರ ಇರುವ ಬಗ್ಗೆಯೂ ಪ್ರಸ್ತಾಪ ಮಾಡಿದ ಪ್ರವಾಸೋದ್ಯಮಿ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಇದು ಸಕಾ೯ರದಿಂದಲೇ ಮಾಡಿರುವ ದರ ಪಟ್ಟಿಯಾಗಿದ್ದು, ಸಕಾ೯ರದ ಆದೇಶದಂತೆಯೇ ಜಾರಿಯಲ್ಲಿದೆ ಎಂದು ಸ್ಪಷ್ಟಪಡಿಸಿದರು. ಪ್ರವಾಸೋದ್ಯಮಿ ಮದನ್ ರೂಪಿಸಿದ ಕೂಗ್೯ ಹೋಟೇಲ್ಸ್, ರೆಸಾಟ್೯ ಅಸೋಸಿಯೇಷನ್ ನ ನೂತನ ವೆಬ್ ಸೈಟ್ ನ್ನು ಇದೇ ಸಂದಭ೯ ಜಿಲ್ಲಾಧಿಕಾರಿ ಅನಾವರಣಗೊಳಿಸಿದರು. ನಗರಸಭೆಯ ಪೌರಾಯುಕ್ತ ರಮೇಶ್, ಪ್ರವಾಸೋದ್ಯಮ ಇಲಾಖೆಯ ಪ್ರಬಾರ ಸಹಾಯಕ ನಿದೇ೯ಶಕ ಬಸಪ್ಪ, ಅಸೋಸಿಯೇಷನ್ ಖಜಾಂಜಿ ಸಾಗರ್ ವೇದಿಕೆಯಲ್ಲಿದ್ದರು. ಕೂಗ್೯ ಹೋಟೇಲ್ಸ್, ರೆಸಾಟ್೯ ಅಸೋಸಿಯೇಷನ್ ಪ್ರಧಾನ ಕಾಯ೯ದಶಿ೯ ನಜೀರ್ ಅಹ್ಮದ್ ಸ್ವಾಗತಿಸಿ, ಉಪಾಧ್ಯಕ್ಷ ಬೇರೇರ ಮಂಜುನಾಥ್ ವಂದಿಸಿ, ಗೌರವ ಸಲಹೆಗಾರ ಜಿ.ಚಿದ್ವಿಲಾಸ್ ನಿರೂಪಿಸಿದ ಕಾಯ೯ಕ್ರಮದಲ್ಲಿ ಪ್ರವಾಸೋದ್ಯಮಿ ಜಿ.ಚಿದ್ವಿಲಾಸ್ ಮತ್ತು ಸಂಧ್ಯಾ ಚಿದ್ವಿಲಾಸ್ ಪ್ರಾಥಿ೯ಸಿದರು. ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ ರೆಸಾಟ್೯, ಹೊಟೇಲ್, ರೆಸ್ಟೋರೆಂಡ್ ಉದ್ಯಮಿಗಳು ಪಾಲ್ಗೊಂಡಿದ್ದರು. ಇದೇ ಸಂದಭ೯ ಸಂಘದ ನಿಕಟಪೂವ೯ ಅಧ್ಯಕ್ಷ ಬಿ. ಆರ್. ನಾಗೇಂದ್ರ ಪ್ರಸಾದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.