ಬೇಗೂರಿನಲ್ಲಿ ಹುಲಿ ದಾಳಿಗೆ ಹಸು ಬಲಿ
admincoorgdaily

ಪೊನ್ನಂಪೇಟೆ, ಜು. 22: ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದ ಕೊಟ್ಟಂಗಡ ರಾಜ ಸುಬ್ಬಯ್ಯ ಅವರಿಗೆ ಸೇರಿದ ಗದ್ದೆಯಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಬುಧವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.
ಕಳೆದ ಎರಡು ವರ್ಷಗಳ ಅವಧಿಯಲ್ಲಿ ಇದೇ ರೈತನಿಗೆ ಸೇರಿದ ಮೂರು ಹಸುಗಳು ಹುಲಿ ದಾಳಿಗೆ ಬಲಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ನಿರಂತರವಾಗಿ ಜಾನುವಾರುಗಳನ್ನು ಕಳೆದುಕೊಳ್ಳುತ್ತಿರುವ ರೈತ ರಾಜ ಸುಬ್ಬಯ್ಯ ಅವರು ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡುವ ಜೊತೆಗೆ ಹುಲಿ ಗ್ರಾಮ ವ್ಯಾಪ್ತಿಗೆ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಘಟನೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.