ಹಾರಂಗಿ ಅಣೆಕಟ್ಟೆಯ ಮುಂಭಾಗದ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

ಹಾರಂಗಿ ಅಣೆಕಟ್ಟೆಯ ಮುಂಭಾಗದ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

ಕುಶಾಲನಗರ ಮೇ 01: ಹಾರಂಗಿ ಅಣೆಕಟ್ಟೆಯಿಂದ 1 ಕಿಲೋಮೀಟರ್ ದೂರದಲ್ಲಿ ನದಿಗೆ ಅಡ್ಡಲಾಗಿ ಕಟ್ಟೆ ಒಂದು ಇದ್ದು ಇಲ್ಲಿಗೆ ಹಲವಾರು ಪ್ರವಾಸಿಗರು ಮತ್ತು ಕಾಲೇಜು ವಿದ್ಯಾರ್ಥಿಗಳು ಈಜಾಡುವುದರೊಂದಿಗೆ ಕುಡಿದು ಮೋಜು-ಮಸ್ತಿ ಮಾಡಿ ತೆರಳುತ್ತಿದ್ದರು ಇದೀಗ ಅಲ್ಲಿ ದೊಡ್ಡ ಗಾತ್ರದ ಮೊಸಳೆ ಒಂದು ಕಾಣಿಸಿಕೊಂಡು ಭಯದ ವಾತಾವರಣ ಸೃಷ್ಟಿಸಿದೆ.

ಮೊಸಳೆಯನ್ನು ಕಂಡು ಓಡಿ ಹೋಗಿ ಕೆಳಗೆ ಬಿದ್ದು ಕೆಲವು ವ್ಯಕ್ತಿಗಳು ಗಾಯಗೊಂಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ ಹಾಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಕುರಿತು ಗಮನ ಹರಿಸಬೇಕು ಮತ್ತು ಪ್ರವಾಸಿಗರು ಹಾಗೂ ಕಾಲೇಜು ವಿದ್ಯಾರ್ಥಿಗಳು ಮೋಜು ಮಸ್ತಿ ಮಾಡಲು ಬಂದು ಮೊಸಳೆ ಬಾಯಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಸ್ಥಳೀಯರು ತಿಳಿಸಿದ್ದಾರೆ.