Kodagu

ಬೆಳೆ ವಿಮೆ ಪ್ರೀಮಿಯಂ ಪಾವತಿ ದಿನಾಂಕ ವಿಸ್ತರಣೆ

admincoorgdaily

ಮಡಿಕೇರಿ-ಪ್ರಸಕ್ತ (2025-26) ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳುಮೆಣಸು ಮತ್ತು ಅಡಿಕೆ ಬೆಳೆಗಳಿಗೆ ರೈತರು ನೋಂದಾಯಿಸಿಕೊಳ್ಳಲು ಈಗಾಗಲೇ ಅಧಿ ಸೂಚನೆಯನ್ನು ಹೊರಡಿಸಲಾಗಿತ್ತು. ಸರ್ಕಾರದ ಆದೇಶದಂತೆ ಆಗಸ್ಟ್, 30 ರವರೆಗೆ ಬೆಳೆ ವಿಮೆ ಪ್ರೀಮಿಯಂ ಪಾವತಿ ದಿನಾಂಕ ವಿಸ್ತರಿಸಲಾಗಿದೆ. ರೈತರು ಇದನ್ನು ಸದುಪಯೋಗ ಪಡೆದುಕೊಳ್ಳುವುದು ಹಾಗೂ ಹತ್ತಿರದ ಬ್ಯಾಂಕ್‍ಗಳಲ್ಲಿ ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಯೋಜನೆ ನೋಂದಾಯಿಸಿಕೊಳ್ಳಬಹುದು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಗಿರೀಶ್ ತಿಳಿಸಿದ್ದಾರೆ.