ಬೆಳೆ ವಿಮೆ ಪ್ರೀಮಿಯಂ ಪಾವತಿ ದಿನಾಂಕ ವಿಸ್ತರಣೆ
admincoorgdaily

ಮಡಿಕೇರಿ:-2026-27ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳುಮೆಣಸು ಮತ್ತು ಅಡಿಕೆ ಬೆಳೆಗಳಿಗೆ ರೈತರು ದಿನಾಂಕ: 31.07.2026 ರೊಳಗೆ ನೊಂದಾಯಿಸಿಕೊಳ್ಳಲು ಅಧಿ ಸೂಚನೆಯನ್ನು ಹೊರಡಿಸಲಾಗಿತ್ತು.
ಸರ್ಕಾರದ ಆದೇಶ ಸಂಖ್ಯೆ: ಊಔಖಖಿI 336 ಊಉಒ 2026, ಬೆಂಗಳೂರು, ದಿನಾಂಕ 07.08.2026ರ ಆದೇಶದಂತೆ ಬೆಳೆ ವಿಮೆ ಪ್ರೀಮಿಯಂ ಪಾವತಿಯ ದಿನಾಂಕವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದೆ. ರೈತರು ಇದನ್ನು ಸದುಪಯೋಗ ಪಡೆದು ಕೊಳ್ಳುವುದು ಹಾಗೂ ಹತ್ತಿರದ ಬ್ಯಾಂಕ್ ಗಳಲ್ಲಿ ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಯೋಜನೆಯನ್ನು ನೊಂದಾಯಿಸಿಕೊಳ್ಳಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.