ಮಡಿಕೇರಿ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಸ್ಪರ್ಧೆ

ಮಡಿಕೇರಿ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ  ಶ್ರೀ ಕೃಷ್ಣ  ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಸ್ಪರ್ಧೆ

ಮಡಿಕೇರಿ: ನಗರದ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಒಡೆಯುವ ಸ್ಫರ್ಧೆ , ಮಕ್ಕಳಿಗೆ ಶ್ರೀ ಕೃಷ್ಣ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿದೆ. ಆಗಸ್ಟ್ 23 ಶನಿವಾರದಂದು ಅಪರಾಹ್ನ 4 ಗಂಟೆಗೆ ದೇವಾಲಯದಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಮಕ್ಕಳಿಗೆ ಶ್ರೀ ಕೃಷ್ಣ ರಾಧೆ ಛದ್ಮವೇಷ ಸ್ಪರ್ಧೆ ಕೂಡಾ ಏರ್ಪಡಿಸಲಾಗಿದೆ. ಭಾಗವಹಿಸುವ ಮಕ್ಕಳು ತಮ್ಮ ಹೆಸರುಗಳನ್ನು 9482192248, 9731411523, 8095858864 ಈ ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು. ಭಕ್ತರು ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಾಲಯದ ಆಡಳಿತ ಮಂಡಳಿ ಕೋರಿದೆ.