ಡಿಜಿ & ಐಜಿಪಿ ಕಮೆಂಡೇಷನ್ ಡಿಸ್ಕ್ ಪ್ರಶಸ್ತಿ: ಸಿದ್ದಾಪುರದ ರಾಣಾಧಿಕಾರಿ ಮಂಜುನಾಥ್‌ ಗೆ ಗೌರವ

Jun 23, 2026 - 11:11
 0  442
ಡಿಜಿ & ಐಜಿಪಿ ಕಮೆಂಡೇಷನ್ ಡಿಸ್ಕ್ ಪ್ರಶಸ್ತಿ:  ಸಿದ್ದಾಪುರದ ರಾಣಾಧಿಕಾರಿ ಮಂಜುನಾಥ್‌ ಗೆ ಗೌರವ

ಸಿದ್ದಾಪುರ :- ರಾಜ್ಯ ಪೊಲೀಸ್ ಇಲಾಖೆಯ 2025–26ನೇ ಸಾಲಿನ ಪ್ರತಿಷ್ಠಿತ ಡಿಜಿ & ಐಜಿಪಿ ಕಮೆಂಡೇಷನ್ ಡಿಸ್ಕ್ ಪ್ರಶಸ್ತಿಗೆ ಸಿದ್ದಾಪುರ ಪೊಲೀಸ್ ಠಾಣೆಯ ರಾಣಾಧಿಕಾರಿ ಮಂಜುನಾಥ್ ಈ. ಆಯ್ಕೆಯಾಗಿದ್ದಾರೆ.

ರಾಜ್ಯದಾದ್ಯಂತ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪೊಲೀಸ್ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಎಂ.ಎ. ಸಲೀಂ ಅವರು ಪ್ರಶಸ್ತಿ ಪ್ರದಾನಕ್ಕೆ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಬಿಂದುಮಣಿ ಅವರ ಶಿಫಾರಸಿನ ಮೇರೆಗೆ ರಾಣಾಧಿಕಾರಿ ಮಂಜುನಾಥ್ ಅವರ ಹೆಸರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅಪರಾಧ ಪ್ರಕರಣಗಳ ತನಿಖೆ, ಮಾದಕ ವಸ್ತುಗಳ ಅಕ್ರಮ ಸಾಗಾಟ ಮತ್ತು ಮಾರಾಟ ತಡೆ, ವಿವಿಧ ಕಾನೂನು ಸುವ್ಯವಸ್ಥೆ ಕಾರ್ಯಾಚರಣೆಗಳಲ್ಲಿ ತೋರಿದ ದಕ್ಷತೆ ಹಾಗೂ ಕರ್ತವ್ಯನಿಷ್ಠ ಸೇವೆಯನ್ನು ಪರಿಗಣಿಸಿ ಅವರಿಗೆ ಈ ಗೌರವ ಲಭಿಸಿದೆ. ಈ ಸಾಲಿನ ಪ್ರಶಸ್ತಿ ಪುರಸ್ಕೃತರಲ್ಲಿ ಐಜಿಪಿ ಶಶಿಕುಮಾರ್, ಡಿಐಜಿಪಿ ಭೀಮಾಶಂಕರ್ ಗುಳೇದ್, ಡಿಸಿಪಿ ಅಕ್ಷಯ್ ಮಚೀಂದ್ರ, ಎಸಿಪಿ ರಾಜೇಶ್ ಎಲ್.ವೈ. ಸೇರಿದಂತೆ ವಿವಿಧ ಹಂತದ 200 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಾನ ಪಡೆದಿದ್ದಾರೆ. ರಾಣಾಧಿಕಾರಿ ಮಂಜುನಾಥ್ ಅವರಿಗೆ ರಾಜ್ಯಮಟ್ಟದ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಸಿದ್ದಾಪುರ ಪೊಲೀಸ್ ಠಾಣೆ ಹಾಗೂ ಕೊಡಗು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದ್ದು, ಪೊಲೀಸ್ ಅಧಿಕಾರಿಗಳು, ಸಹೋದ್ಯೋಗಿಗಳು ಮತ್ತು ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

What's Your Reaction?

Like Like 2
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0