ಡಿ.ಕೆ.ಶಿವಕುಮಾರ್ ಪ್ರಮಾಣವಚನ: ಕಾಂಗ್ರೆಸ್ ಸಂಭ್ರಮಾಚರಣೆ
ಕುಶಾಲನಗರ,ಜುಂ೩: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆ ನಗರ ಕಾಂಗ್ರೆಸ್ ವತಿಯಿಂದ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಅವರ ನೇತೃತ್ವದಲ್ಲಿ ಕುಶಾಲನಗರ ನಗರ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಪರವಾಗಿ ಘೋಷಣೆಗಳನ್ನು ಕೂಗಿ, ಸಿಹಿ ವಿತರಸಿ ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ನಗರಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಉತ್ತಮವಾದ ಆಡಳಿತ ನೀಡಲಿದೆ ಎಂದರು.
ಕೂಡಾ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ ಮಾತನಾಡಿ, ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಹಾಗೆಯೇ ಡಾ.ಮಂತರ್ ಗೌಡರವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಮಾಜಿ ಕೂಡಾ ಅಧ್ಯಕ್ಷರಾದ ಮಂಜುನಾಥ್ ಗುಂಡೂರಾವ್ ಮಾತನಾಡಿ, ಜೆಲ್ಲೆಯ ಎರಡೂ ಶಾಸಕರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಕೊಡಗಿನ ಸರ್ವತೋಮುಖ ಅಭಿವೃದ್ಧಿಗೆ ನೂತನ ಮುಖ್ಯಮಂತ್ರಿಗಳು ನಾಂದಿಯಾಡಬೇಕು ಎಂದರು. ಈ ಸಂದರ್ಭ ಕುಶಾಲನಗರ ಪುರಸಭೆ ಮಾಜಿ ಸದಸ್ಯರಾದ ವಿ.ಎಸ್.ಆನಂದ್ ಕುಮಾರ್, ಖಲೀಮುಲ್ಲಾ, ಶಿವಶಂಕರ್, ಪದ್ಮ, ಪ್ರಕಾಶ್, ನವೀನ್, ಜಿ.ಬಿ.ಜಗದೀಶ್, ಕಾಂಗ್ರೆಸ್ ಮುಖಂಡರಾದ ಚಂದ್ರು, ರಶೀದ್, ಅನಿಲ್, ರವಿ, ಸಂಗೀತಾ, ಗೋವಿಂದಯ್ಯ, ಜಲೀಲ್ ಹಾಗೂ ಇನ್ನಿತರರು ಇದ್ದರು.
