ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಪ್ರಯುಕ್ತ ದಲಿತ ಸಂಘರ್ಷ ಸಮಿತಿ ವತಿಯಿಂದ ಫೆ.22 ರಂದು ಸ್ವಾಭಿಮಾನಿ ಸಮಾವೇಶ

Jan 30, 2026 - 18:03
 0  77
ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಪ್ರಯುಕ್ತ ದಲಿತ ಸಂಘರ್ಷ ಸಮಿತಿ ವತಿಯಿಂದ ಫೆ.22 ರಂದು  ಸ್ವಾಭಿಮಾನಿ ಸಮಾವೇಶ

ಮಡಿಕೇರಿ: ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಪ್ರಯುಕ್ತ ದಲಿತ ಸಂಘರ್ಷ ಸಮಿತಿ ವತಿಯಿಂದ ಫೆ.22 ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ಬಾಬಾಸಾಹೇಬ್ ಅನುಯಾಯಿಗಳೊಂದಿಗೆ ಸ್ವಾಭಿಮಾನಿ ಸಮಾವೇಶ ನಡೆಯಲಿದೆ ಎಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ತಿಳಿಸಿದ್ದಾರೆ.

ಕಾರ್ಯಕ್ರಮ ಪ್ರಯುಕ್ತ ಅಂದು ಬೆಳಗ್ಗೆ 11 ಗಂಟೆಗೆ ನಗರದ ಅಶೋಕ್‌ಪುರದಿಂದ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ಸುಮಾರು 100 ಬೈಕುಗಳು, 20 ಕಳಸ ಹೊತ್ತ ಮಹಿಳೆಯರು ಹಾಗೂ ಪೂರ್ವಿಕರ ಸ್ತಬ್ದ ಚಿತ್ರ, ಡೊಳ್ಳು ಕುಣಿತ ವೀರಗಾಸೆ ಕುಣಿತ ಹಾಗೂ ಕೊನೆಯಲ್ಲಿ ಬುದ್ದ ಅಂಬೇಡ್ಕರ್ ಅವರ ರಥವಿರಲಿದೆ. 1 ಗಂಟೆಗೆ ಗಾಂಧಿ ಮೈದಾನ ಸೇರಲಿದೆ.

 ನಂತರ 2 ಗಂಟೆಗೆ ಸಭಾ ಕಾರ್ಯಕ್ರಮ ನಡೆಯುತ್ತದೆ. ಕಾರ್ಯಕ್ರಮಕ್ಕೆ ಸುಮಾರು 5,000 ಜನ ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಹಲವಾರು ಗಣ್ಯ ವ್ಯಕ್ತಿಗಳು ಸಮಾಜ ಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸ್ವಾಭಿಮಾನ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಸಿ.ಮಹಾದೇವಪ್ಪರವರಿಗೆ ದಲಿತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

 ಜಿಲ್ಲೆಯ ಎರಡು ಶಾಸಕರರುಗಳಾದ ಎ.ಎಸ್.ಪೊನ್ನಣ್ಣ ಮತ್ತು ಮಂತರ್‌ಗೌಡರ ಕೆಲಸಕಾರ್ಯಗಳನ್ನು ಮೆಚ್ಚಿ ಕೊಡಗು ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ನಮ್ಮ ಸಂಘಟನೆ ಬೆಳವಣಿಗೆಗೆ ಕಾರಣಕರ್ತರಾದ ನಿವೃತ್ತ ಉಪಮುಖ್ಯ ವೈದ್ಯಾಧಿಕಾರಿ ಡಾ.ಹೆಚ್.ವಿ.ದೇವದಾಸ್, ಕೊಡಗು ಜಿಲ್ಲೆಯಲ್ಲಿ ಸಂಘಟನೆಯನ್ನು ಹುಟ್ಟುಹಾಕಿದ ಹಿರಿಯರಾದ ಜೋಯಪ್ಪ ಹಾನಗಲ್ ಹಾಗೂ ಕೊಡಗಿನ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಹಾಗೂ ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿಗಳು ಸಿದ್ದನವರಿಗೆ ಕೊಡಗಿನ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಜೊತೆಗೆ ಪ್ರತಿ ವರ್ಷದಂತೆ 2024-25ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಟಿ.ಜೆ.ಈರಪ್ಪ, ಪ್ರಮುಖರಾದ ವೀರಭದ್ರಯ್ಯ, ಪ್ರೇಮ ಕೃಷ್ಣಪ್ಪ, ವೇಣು ಕಿಶೋರ್, ಜಗದೀಶ್ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0