ಎಮ್ಮೆಮಾಡುವಿನಲ್ಲಿ ಗಾಳಿ-ಮಳೆಗೆ ತಡೆಗೋಡೆ ಕುಸಿದು ನಷ್ಟ
ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲು ಸಮೀಪದ ಎಮ್ಮೆಮಾಡು ಗ್ರಾಮದಲ್ಲಿ ಶುಕ್ರವಾರ ಸುರಿದ ಭಾರೀ ಗಾಳಿ- ಮಳೆಗೆ ಎಮ್ಮೆಮಾಡು ಗ್ರಾಮದ ನಿವಾಸಿ ಟಿ. ಎ.ಅಬ್ದುಲ್ ಅಫೀಲ್ ಎಂಬುವವರ ಮನೆಯ ಸಮೀಪದಲ್ಲಿ ಅಳವಡಿಸಲಾಗಿದ್ದ ಬೃಹತ್ ತಡೆಗೋಡೆ ಕುಸಿದು ನಷ್ಟ ಸಂಭವಿಸಿದೆ.ಅಲ್ಲದೆ ತಡೆಗೋಡೆಯ ಪಕ್ಕದಲ್ಲೇ ನಿರ್ಮಿಸಲಾಗಿದ್ದ ಕಾರ್ ಶೆಡ್ ನ ಶೀಟ್ ಗಳು ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗೆ ಲೇಖನ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.