ದಶಮಂಟಪಗಳ ಶೋಭಯಾತ್ರೆ:ಸ್ಥಳ ಪರಿಶೀಲನೆ ನಡೆಸಿದ ಶಾಸಕ ಡಾ.ಮಂತರ್ ಗೌಡ
admincoorgdaily
ಮಡಿಕೇರಿ:ಐತಿಹಾಸಿಕ ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಮಗಳ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಮಡಿಕೇರಿ ನಗರದಾದ್ಯಂತ ಕೈಗೊಂಡಿರುವ ಕ್ರಮಗಳ ಬಗ್ಗೆ ಶಾಸಕರಾದ ಶ್ರೀ ಡಾ. ಮಂತರ್ ಗೌಡ ರವರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ವಾಹನ ನಿಲುಗಡೆ ವ್ಯವಸ್ಥೆ, ಸುಗಮ ಸಂಚಾರ ವ್ಯವಸ್ಥೆ ಹಾಗೂ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಶಾಸಕರು ಸೂಚನೆ ನೀಡಿದರು.