ತಾಯಿಗೆ ಚಪ್ಪಲಿಯಿಂದ ಹೊಡೆದ ಮಗಳು: ನೋಡುತ್ತಾ ವಿಡಿಯೋ ಮಾಡಿದವರ ನಿರ್ಲಕ್ಷ್ಯಕ್ಕೆ ಆಕ್ರೋಶ

Nov 29, 2025 - 12:15
 0  1.7k

ಮಂಗಳೂರು, ನ.28: ನಗರದ ಮೂಡುಶೆಡ್ಡೆ ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿ ಯುವತಿ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಶಿವನಗರ ಪ್ರದೇಶದಲ್ಲಿ ನಿವಾಸಿಗಳಾದ ತಾಯಿ–ಮಗಳು ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿದ್ದು, ಈ ಕುರಿತು ತಾಯಿ ಹಲವು ಬಾರಿ ಕಾವೂರು ಠಾಣೆಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ಇಬ್ಬರಿಗೂ ಬುದ್ದಿ ಹೇಳಿ ಮನೆಗೆ ಕಳುಹಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಗ್ರಾಮ ಪಂಚಾಯಿತಿಗೆ ತೆರಳಿ ದೂರು ಸಲ್ಲಿಸುತ್ತಿದ್ದ ತಾಯಿ ಹಾಗೂ ಮಗಳ ನಡುವೆ ಮತ್ತೊಮ್ಮೆ ಜಗಳ ಸಂಭವಿಸಿದೆ. ಈ ವೇಳೆ ಆಕ್ರೋಶಗೊಂಡ ಮಗಳು ತಾಯಿಯನ್ನು ತಳ್ಳಿದ ನಂತರ ಚಪ್ಪಲಿಯಿಂದ ಮುಖಕ್ಕೆ ಹೊಡೆದಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಕಚೇರಿಯಲ್ಲಿದ್ದ ಕೆಲ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲೇ ಘಟನೆ ನಡೆದಿದ್ದರೂ, ಯಾರೂ ತಾಯಿಗೆ ನೆರವಾಗದೆ ವೀಡಿಯೋ ಮಾಡುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಘಟನೆ ಕುರಿತು ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕಿತ್ತು ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬಂದಿದೆ. ಆದರೆ, ತಾಯಿ–ಮಗಳ ಈ ಹೊಡೆದಾಟಕ್ಕೆ ಸಂಬಂಧಿಸಿದಂತೆ ಇನ್ನೂ ಯಾವುದೇ FIR ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

What's Your Reaction?

Like Like 0
Dislike Dislike 0
Love Love 1
Funny Funny 1
Angry Angry 4
Sad Sad 3
Wow Wow 0