ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ

Apr 1, 2026 - 19:43
 0  263
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ

ದಾವಣಗೆರೆ; ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಾ.ಮಂತರ್ ಗೌಡ ರವರು ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರುಗಳೊಂದಿಗೆ ಮನೆ ಮನೆಗೆ ತೆರಳಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು.

ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಯೋಜನೆಗಳು ಮನೆ ಮನೆಗೆ ತಲುಪಿದ್ದು ಈ ಬಾರಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾನ್ಯ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿರಲಿದ್ದಾರೆ ಎಂದು ಮಾನ್ಯ ಶಾಸಕರಾದ ಡಾ.ಮಂತರ್ ಗೌಡ ರವರು ಪ್ರಚಾರದಲ್ಲಿ ತಿಳಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0