ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದು!

ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದು!
ನಿಮಿಷಾ ಪ್ರಿಯಾ

ಯೆಮೆನ್: ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಮರಣದಂಡನೆಯ ಶಿಕ್ಷೆಗೆ ಒಳಗಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಗ್ಲೋಬಲ್ ಪೀಸ್ ಇನಿಶಿಯೇಟಿವ್ ಸಂಸ್ಥಾಪಕ ಡಾ. ಕೆ.ಎ. ಪೌಲ್ ಹೇಳಿದ್ದಾರೆ. ಆದರೆ ಈ ಕುರಿತು ಭಾರತ ಸರ್ಕಾರ, ಯೆಮೆನ್‌ ಹಾಗೂ ನಿಮಿಷಾ ಪ್ರಿಯಕುಟುಂಬಸ್ಥರಿಂದ ಯಾವುದೇ ಅಧಿಕೃತ ಹೇಳಿಕೆಗಳು ಇದುವರೆಗೂ ಹೊರ ಬಂದಿಲ್ಲ. ಸೋಮವಾರ ರಾತ್ರಿ ಯೆಮೆನ್‌ ನ ಸನಾದಿಂದ ಬಿಡುಗಡೆ ಮಾಡಿದ ವೀಡಿಯೋ ಸಂದೇಶದಲ್ಲಿ ಪೌಲ್ ಅವರು,ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆ ರದ್ದುಗೊಂಡಿರುವ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಜುಲೈ 17 ರಂದು ಗಲ್ಲು ಶಿಕ್ಷೆಗೆ ಒಳಗಾಗಿದ್ದ ನಿಮಿಷಾ ಪ್ರಿಯ ಅವರ ಗಲ್ಲು ಶಿಕ್ಷೆಗೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕರ್ ಮುಸ್ಲಿಯಾರ್ ಪ್ರಯತ್ನಿಸಿ ತಾತ್ಕಾಲಿಕ ತಡೆ ತಂದುಕೊಟ್ಟಿದ್ದರು.