ದೆಹಲಿ: ಗಣರಾಜ್ಯೋತ್ಸವ ಪಥಸಂಚಲನಕ್ಕೆ ನಾಪೋಕ್ಲುವಿನ ಸ್ವಾತಿ ಆಯ್ಕೆ
admincoorgdaily

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಳ್ಳಲು ಕೊಡಗು ಜಿಲ್ಲೆಯ ನಾಪೋಕ್ಲುವಿನ ಜೆ.ಡಿ.ಸ್ವಾತಿ ಆಯ್ಕೆಯಾಗಿದ್ದಾರೆ. ಮೈಸೂರಿನ ಸೆಂಟ್ ಫಿಲೋಮಿನಾಸ್ ಪದವಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಸ್ವಾತಿ ಎನ್ ಸಿ ಸಿ ಯಿಂದ ಜೂನಿಯರ್ ಅಂಡರ್ ಆಫೀಸರ್ ಆಗಿ ಜ.26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.ಸ್ವಾತಿ ನಾಪೋಕ್ಲುವಿನ ನೂರಂಬಡ ಮಠದ ದೇವರಾಜು ಹಾಗೂ ನಯನ ದಂಪತಿಗಳ ಪುತ್ರಿಯಾಗಿದ್ದಾರೆ.