Kodagu

ಕೂಡುಮಂಗಳೂರು ಕೈಗಾರಿಕಾ ಪ್ರದೇಶಕ್ಕೆ ಮೂಲಸೌಕರ್ಯಕ್ಕೆ ಅನುದಾನಕ್ಕೆ ಆಗ್ರಹ:ಶಾಸಕ ಡಾ.ಮಂತರ್ ಗೌಡ ಅವರ ಮನವಿಗೆ ಸಚಿವರ‌ ಸ್ಪಂದನೆ

admincoorgdaily

ಕೂಡುಮಂಗಳೂರು ಕೈಗಾರಿಕಾ ಪ್ರದೇಶಕ್ಕೆ ಮೂಲಸೌಕರ್ಯಕ್ಕೆ ಅನುದಾನಕ್ಕೆ ಆಗ್ರಹ:ಶಾಸಕ ಡಾ.ಮಂತರ್ ಗೌಡ ಅವರ ಮನವಿಗೆ ಸಚಿವರ‌ ಸ್ಪಂದನೆ

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ ಕೆ.ಐ.ಎ.ಡಿ.ಬಿ. ಕೈಗಾರಿಕಾ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ಸಲ್ಲಿಸಿದ್ದ ಮನವಿ ಪತ್ರವನ್ನು ಲಗತ್ತಿಸಿ ಸಚಿವರು ಕೆ.ಐ.ಎ.ಡಿ.ಬಿ.ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ಸದಸ್ಯರಿಗೆ ಸೂಚಿಸಿದ್ದಾರೆ.

 ಕೂಡುಮಂಗಳೂರು ಕೈಗಾರಿಕಾ ಪ್ರದೇಶದಲ್ಲಿ ಪ್ರತಿನಿತ್ಯ ಸಾವಿರಾರು ಕಾರ್ಮಿಕರು ಹಾಗೂ ಉದ್ಯಮಗಳ ವಾಹನಗಳು ಸಂಚರಿಸುತ್ತಿದ್ದು, ರಸ್ತೆಗಳು ತೀರಾ ಹಾಳಾಗಿವೆ. ಸದರಿ ಪ್ರದೇಶದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ಚರಂಡಿ ಮತ್ತು ಇತರೆ ಮೂಲಸೌಲಭ್ಯ ಕಲ್ಪಿಸಲು ಸೂಕ್ತ ಅನುದಾನ ಒದಗಿಸುವಂತೆ ಶಾಸಕರು ಮನವಿಯಲ್ಲಿ ಕೋರಿದ್ದರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.