ಅಧಿವೇಶನದಲ್ಲಿ ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಸಲು ಆಗ್ರಹ : ಪಿ.ಆರ್.ಭರತ್

Nov 21, 2025 - 16:28
 0  215
ಅಧಿವೇಶನದಲ್ಲಿ ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಸಲು ಆಗ್ರಹ : ಪಿ.ಆರ್.ಭರತ್

ಮಡಿಕೇರಿ: ರಾಜ್ಯದಲ್ಲಿ 63 ಸಾವಿರ ಗ್ರಾಮ ಪಂಚಾಯತ್ ನೌಕರರಿದ್ದು, ಪ್ರಸಕ್ತ ಸಾಲಿನ ಡಿಸೆಂಬರ್‌ನಲ್ಲಿ ನಡೆಯುವ ಚಳಿಗಾಲ ಅಧಿವೇಶನದಲ್ಲಿ ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಸಲು ಒತ್ತಡ ಹೇರಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಅಧ್ಯಕ್ಷ ಪಿ.ಆರ್.ಭರತ್ ಒತ್ತಾಯಿಸಿದರು.

ರಾಜ್ಯದ ಎಲ್ಲಾ ಪಂಚಾಯಿತಿಗಳಲ್ಲಿ ಕರ ವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾಗಾರರು, ವಾಟರ್‌ಮೆನ್‌ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಅವರ ಕನಿಷ್ಠ ವೇತನ ಬೇಡಿಕೆ ಇದುವರೆಗೂ ಈಡೇರಿಲ್ಲ. ಇಂದು ಮುಖ್ಯಮಂತ್ರಿಗಳ ಕೈಯಲ್ಲಿ ಗ್ರಾಮ ಪಂಚಾಯತ್ ನೌಕರ ಬೇಡಿಕೆ ಮನವಿ ತಲುಪಿದ್ದು, ರಾಜ್ಯ ಎಲ್ಲಾ ಶಾಸಕರು ಒತ್ತಾಯಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವಂತಾಗಬೇಕು ಎಂದರು. ಇವತ್ತಿನ ಬೆಲೆ ಏರಿಕೆಯ ಆಧಾರದಲ್ಲಿ ಪಂಚಾಯತ ನೌಕರರಿಗೆ ರೂ.೩೬೦೦೦ ವೇತನ ನೀಡಬೇಕು.

 ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು. ಈಗಾಗಲೇ ಆರ್ಥಿಕ ಇಲಾಖೆಗೆ ಅನುಮೋದನೆಗಾಗಿ ಪುಸ್ತಾವನೆ ಸಲ್ಲಿಸುವುದಕ್ಕೆ ಅನುಮೋದನೆ ಪಡೆಯಬೇಕು. ತರಬೇತಿ ಪಡೆದಿರುವ ಎಲ್ಲಾ ಸ್ವಚ್ಛ ವಾಹಿನಿ ನೌಕರರಿಗೆ ಉದ್ಯೋಗ ನೀಡಬೇಕು. ಒಡಂಬಡಿಕೆ ಪತ್ರ ಮತ್ತು ಪ್ರತಿ ವರ್ಷದ ನವಿಕರಣ ಪದ್ಧತಿ ರದ್ದು ಪಡಿಸಬೇಕು. ೧೫ನೇ ಹಣಕಾಸಿನಲ್ಲಿ ವೇತನ ಪಾವತಿ ಮಾಡಬೇಕು.

ಪ್ರತಿಯೊಂದು ಪಂಚಾಯತಗೆ ಒಬ್ಬರೇ ಚಾಲಕರೆಂದು ಪರಿಗಣಿಸಿ ರೂ.೧೫೦೦೦ ವೇತನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಉಪಾಧ್ಯಕ್ಷರಾದ ಮಹದೇವ್, ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಧುಸೂದನ್, ಪ್ರಮುಖರಾದ ದಿಲೀಪ್ ಕುಮಾರ್, ಸೌಮ್ಯ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0