ಶಾಸಕ ಎಎಸ್ ಪೊನ್ನಣ್ಣ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪೊನ್ನಂಪೇಟೆಯಲ್ಲಿ ದೂರು ದಾಖಲು

ಶಾಸಕ ಎಎಸ್ ಪೊನ್ನಣ್ಣ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪೊನ್ನಂಪೇಟೆಯಲ್ಲಿ ದೂರು ದಾಖಲು

ಪೊನ್ನಂಪೇಟೆ:ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣನವರ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್ ರವರ ನೇತೃತ್ವದಲ್ಲಿ ದೂರು ದಾಖಲಿಸಲಾಯಿತು. ದೂರು ದಾಖಲಿಸುವ ಸಂದರ್ಭದಲ್ಲಿ ನವೀನ್ ರವರೊಂದಿಗೆ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ಬಾನಂಡ ಪ್ರತ್ಯು, ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಅಣ್ಣೀರ ಹರೀಶ್, ಗ್ಯಾರೆಂಟಿ ಅನುಷ್ಠಾನ ಸದಸ್ಯರಾದ ಸಿದ್ದು ನಾಚಪ್ಪ, ಪಕ್ಷದ ಪ್ರಮುಖರಾದ ಮನು ಹಾಗೂ ನಿಖಿಲ್, ವಕೀಲರಾದ ಪೂವಣ್ಣ ಹಾಗೂ ಸುರೇಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.