15 ರೂಪಾಯಿ ಕೊಟ್ಟರೆ ಕೊಡಗಿನಲ್ಲಿ ಹೆಣ್ಣುಮಕ್ಕಳು ಸಿಕ್ತಾರೆ ಎಂದು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ:ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು
ಮಡಿಕೇರಿ: ಕೊಡಗಿನ ಹೆಣ್ಣುಮಕ್ಕಳನ್ನು ಆಪ್ ಮೂಲಕ ಮಾಧ್ಯಮದಲ್ಲಿ ಹೀನಾಯವಾಗಿ ಅವಮಾನಿಸಿ, 15 ರೂಪಾಯಿ ಕೊಟ್ಟರೆ ಕೊಡಗಿನಲ್ಲಿ ಹೆಣ್ಣುಮಕ್ಕಳು ಸಿಗುತ್ತಾರೆ” ಎಂಬ ಅಸಭ್ಯ ಹಾಗೂ ನಿಂದನಾತ್ಮಕ ಹೇಳಿಕೆ ಮಾಡಿದ ವ್ಯಕ್ತಿಗಳ ವಿರುದ್ಧ ಕೊಡಗು ಅಭಿವೃದ್ಧಿ ಸಮಿತಿ ಜಿಲ್ಲಾಧ್ಯಕ್ಷದ ಪ್ರಸನ್ನ ಭಟ್ ದೂರು ದಾಖಲಿಸಿದ್ದಾರೆ.
ಈ ಸಂಬಂಧ, ನಿನ್ನೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಮಡಿಕೇರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಲಾಗಿದೆ. ಕೊಡಗು ಅಭಿವೃದ್ಧಿ ಸಮಿತಿಯ ಜಿಲ್ಲಾಧ್ಯಕ್ಷರಾದ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ಸಲ್ಲಿಸಲಾದ ದೂರಿನ ಮೇರೆಗೆ, ಐಟಿ ಆಕ್ಟ್ ಅಡಿ 2008 ( u/s 67) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಕೊಡಗಿನ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿರುವ ಈ ಕೃತ್ಯವನ್ನು ಕೊಡಗು ಅಭಿವೃದ್ಧಿ ಸಮಿತಿ ತೀವ್ರವಾಗಿ ಖಂಡಿಸಿದ್ದು, ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.