ನಾಪೋಕ್ಲುವಿನಲ್ಲಿ ಧರ್ಮಸ್ಥಳ ಸಂಘದಿಂದ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮ
admincoorgdaily

ನಾಪೋಕ್ಲು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ )ಮಡಿಕೇರಿ ತಾಲೂಕು ಭಾಗಮಂಡಲ ವಲಯದ ವತಿಯಿಂದ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು.
ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಚಂದ್ರ ಪ್ರಕಾಶ್ ರವರು ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಘದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆಯವರು ಧರ್ಮಸ್ಥಳದಿಂದ ಕಾರ್ಯಕ್ರಮದ ಕುರಿತು ಆಶೀರ್ವಚನ ನೀಡಿದರು.
ವೀರೇಂದ್ರ ಹೆಗಡೆ ಅವರ ಪತ್ನಿ ಹೇಮಾವತಿ ಹೆಗಡೆಯವರು ಮಾದಕ ವಸ್ತು ಸೇವನೆ ಯಾವ ರೀತಿ ಅಪಾಯಕಾರಿ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಬೆಂಗಳೂರು ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ ಅವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಹಾಗೂ ಅದರ ವಿರುದ್ಧವಿರುವ ಕಾನೂನು ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಬೆಂಗಳೂರಿನ ಖ್ಯಾತ ಹೃದ್ರೋಗ ತಜ್ಞರಾದ ಡಾ.ದೇವಿ ಪ್ರಸಾದ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಳಾದ ಎಸ್.ಎಸ್.ಅನಿಲ್ ಅವರು ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ನಾಪೋಕ್ಲು ಕೆಪಿಎಸ್ ಶಾಲೆಯ ಪ್ರಭಾರ ಉಪಪ್ರಾಂಶುಪಾಲರಾದ ಎಂ. ಎಸ್ ಶಿವಣ್ಣ, ಧರ್ಮಸ್ಥಳ ಸಂಘದ ವಲಯ ಮೇಲ್ವಿಚಾರಕರಾದ ಸಂತೋಷ್, ಸೇವಾಪ್ರತಿನಿಧಿ ಉಮಾಲಕ್ಷ್ಮಿ, ಶಾಲೆಯ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿವೇಕ್ ವಿನ್ಸೆಂಟ್ ಪಾಯ್ಸ್ ಅವರು ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಪ್ರಭಾರ ಪ್ರಾಂಶುಪಾಲರಾದ ಶಿವಣ್ಣ ಸ್ವಾಗತಿಸಿ ಸರ್ವರನ್ನು ವಂದಿಸಿದರು.