ಧರ್ಮಸ್ಥಳ ಪ್ರಕರಣ,ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಸಿಪಿಐ(ಎಂ)

ಧರ್ಮಸ್ಥಳ ಪ್ರಕರಣ,ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಸಿಪಿಐ(ಎಂ)

ಮಡಿಕೇರಿ:ಧರ್ಮಸ್ಥಳದ ಸುತ್ತ ನಡೆದ ಹಲವು ಅಸಹಜ ಸಾವುಗಳ ಪ್ರಕರಣಗಳ ತನಿಖೆಗೆ ಎಸ್.ಐ.ಟಿ.ರಚನಿಸಿದ್ದು ಸಿ.ಪಿ.ಐ. (ಎಂ) ಸ್ವಾಗತಿಸಿದ್ದು,ನಿಷ್ಪಕ್ಷಪಾತ ತನಿಖೆಗೆ ಒತ್ತಾಯ ಮಾಡುತ್ತಿದ್ದೇವೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಾರಂಭಿಕ ಹಂತದಲ್ಲೇ ಪ್ರಶ್ನೆಗೆ ಒಳಪಟ್ಟು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದ ಅಸಹಜ ಸಾವುಗಳ ಪ್ರಕರಣದ ತನಿಖೆಗೆ ಎಸ್.ಐ.ಟಿ ರಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ಸಿ.ಪಿ.ಐ. (ಎಂ) ಕೊಡಗು ಜಿಲ್ಲಾ ಸಮಿತಿ ಸ್ವಾಗತಿಸುತ್ತದೆ. 80ರ ದಶಕದಲ್ಲಿ ನಡೆದ ಪದ್ಮಲತಾ ಪ್ರಕರಣದ ಸಂದರ್ಭದಿಂದಲೇ ಸಿ.ಪಿ.ಐ(ಎಂ) ಪಕ್ಷ ಅಲ್ಲಿನ ವಿದ್ಯಮಾನಗಳಿಗೆ ವಿರೋಧ ವ್ಯಕ್ತಪಡಿಸಿದೆ. ಹಲವು ಹಂತಗಳ ಹೋರಾಟವನ್ನೂ ಮಾಡಿದೆ.ಆ ನಂತರವಷ್ಟೇ ಸಿ.ಬಿ.ಐ. ತನಿಖೆಗೆ ಒಪ್ಪಿಸಲಾಗಿತ್ತು.ಹಲವು ವರ್ಷಗಳ ಹಿಂದೆ ಪ್ರಕರಣಗಳು ನಡೆದು ಉದ್ದೇಶಪೂರ್ವಕವಾಗಿ ಸಾಕ್ಷಿನಾಶ ಮಾಡಲಾಗಿದೆ. ಎಂದೂ ಕುಖ್ಯಾತವಾಗಿದ್ದ ಪ್ರಕರಣಗಳು ಇರುವುದರಿಂದ ಕೂಲಂಕುಷವಾದ ತನಿಖೆ ನಡೆಯಬೇಕಿದೆ.

ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಪ್ರಾರಂಭದ ದಿನಗಳಿಂದ ಪ್ರಕರಣಗಳ ಬೆನ್ನು ಹತ್ತಿ ಹೋರಾಟ ಪ್ರತಿಭಟನೆ ಗಳನ್ನು ಮಾಡಿದ ಸಂಘ, ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಸ್.ಐ.ಟಿ. ನಿಷ್ಪಕ್ಷಪಾತ ತನಿಖೆ ನಡೆಸಬೇಕು. ನಿರ್ದಿಷ್ಟ ಕಾಲಮಿತಿಯಲ್ಲಿ ತನಿಖೆ ನಡೆದು ಸತ್ಯವನ್ನು ಹೊರಗೆಳೆಯಬೇಕು. ಸಿ.ಬಿ.ಐ.ನ್ಯಾಯಾಲಯದ ತೀರ್ಪು ಸೂಚಿಸಿರುವಂತೆ ಸೌಜನ್ಯ ಪ್ರಕರಣದಲ್ಲಿ ಪ್ರಾಥಮಿಕ ಹಂತದಲ್ಲಿ ತನಿಖೆಯ ದಾರಿ ತಪ್ಪಿಸಲು. ಸಾಕ್ಷಿ ನಾಶ ಮಾಡಿದ ತನಿಖಾಧಿಕಾರಿಗಳನ್ನು ತೀವ್ರ ತನಿಖೆಗೆ ಒಳಪಡಿಸಬೇಕು. ನ್ಯಾಯದ ಪರ ನಿಂತು ಸತ್ಯವನ್ನು ಹೊರಗೆಳೆದು ನಿಜವಾದ ಆರೋಪಿಗಳನ್ನು ಮತ್ತು ಅವರ ರಕ್ಷಣೆಗೆ ನಿಂತವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಹೆಚ್‌ಬಿ ರಮೇಶ್ ಒತ್ತಾಯಿಸಿದ್ದಾರೆ.