ಧರ್ಮಸ್ಥಳ ಪ್ರಕರಣ:ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್ಐಟಿ ತನಿಖೆಗೆ ಎಸ್.ಡಿಪಿಐ ಆಗ್ರಹ

ಧರ್ಮಸ್ಥಳ ಪ್ರಕರಣ:ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್ಐಟಿ ತನಿಖೆಗೆ ಎಸ್.ಡಿಪಿಐ ಆಗ್ರಹ

ಕುಶಾಲನಗರ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಸರ್ಕಾರ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಒತ್ತಾಯಿಸಿ ಕುಶಾಲನಗರದಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕುಶಾಲನಗರ ಎಸ್‌ಡಿಪಿಐ ನಗರ ಅಧ್ಯಕ್ಷ ಜಕ್ರಿಯಾ ನೇತೃತ್ವದಲ್ಲಿ ಪಟ್ಟಣದ ಎಸ್‌ಡಿಪಿಐ ಕಚೇರಿ ಮುಂಭಾಗ ಸೇರಿದ ಕಾರ್ಯಕರ್ತರು ಘೋಷಣೆ ಕೂಗಿ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭ ಮಾತನಾಡಿದ ಎಸ್.ಡಿ.ಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಸ್ಸೀನ್,ಧರ್ಮ ಸ್ಥಳದಲ್ಲಿ ನೂರಾರು ಹೆಣ್ಣು ಮಕ್ಕ ಅತ್ಯಾಚಾರ,ಕೊಲೆ ಶಂಕಿತ ಪ್ರಕರಣಗಳು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.ಆದರೂ ಸಹಾ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಸರ್ಕಾರ ಕೂಡಲೇ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್.ಐ.ಟಿ ತನಿಖೆ ನಡೆಸಬೇಕೆಂದು ಅಮೀನ್ ಮೊಹಸ್ಸೀನ್ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಪ್ರಮುಖರಾದ ಉಸ್ಮಾನ್ ಸುಂಟಿಕೊಪ್ಪ, ಭಾಷಾ ಮತ್ತಿತರರು ಇದ್ದರು.