ಧರ್ಮಸ್ಥಳ:3ನೇ ದಿನ ಮೃತಹದೇಹಗಳ ಪತ್ತೆ ಶೋಧ ಕಾರ್ಯ,ದೂರುದಾರ ಗುರುತಿಸಿರುವ ಆರನೇ ಸ್ಥಳದಲ್ಲಿ ಎಲುಬಿನ ಚೂರುಗಳು ಪತ್ತೆ

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ 3ನೇ ದಿನದ ಶೋಧ ಕಾರ್ಯದ ವೇಳೆ ಕೆಲವು ಅವಶೇಷಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗುತ್ತಿದೆ. ಆದರೆ ಈ ವಿಚಾರವನ್ನು ಎಸ್ಐಟಿ ಇನ್ನೂ ಖಚಿತಪಡಿಸಿಲ್ಲ. ದೂರುದಾರ ಗುರುತಿಸಿರುವ ನೇತ್ರಾವತಿ ಸ್ನಾನ ಘಟ್ಟದ ಸಮೀಪವಿರುವ ಆರನೇ ಸ್ಥಳದಲ್ಲಿ ಅಗೆಯುವ ವೇಳೆ ಕೆಲವು ಎಲುಬಿನ ಚೂರುಗಳು ಲಭಿಸಿರುವ ಬಗ್ಗೆ ಮಾಹಿತಿಗಳು ಹೊರಬರುತ್ತಿವೆ. ಈ ಬಗ್ಗೆ ಎಸ್ಐಟಿ ಅಧಿಕಾರಿಗಳಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.