ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ ಶಿಬಿರ
ಮಡಿಕೇರಿ; ರಾಷ್ಟೀಯ ಸ್ವಯಂ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ಸಹಯೋಗದಲ್ಲಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಮಾರ್ಗದರ್ಶನದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ “ಯುವ ಆಪದಾ ಮಿತ್ರ ಯೋಜನೆ”ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಮಾರ್ಚ್ 12 ರಂದು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅನನ್ಯ ವಾಸುದೇವ್ ಅವರು ಯುವ ಆಪತ್ ಮಿತ್ರ ಯೋಜನೆಯ ಮಹತ್ವ ಹಾಗೂ ವಿಪತ್ತು ಸಂದರ್ಭಗಳಲ್ಲಿ ಯುವಕರ ಪಾತ್ರದ ಬಗ್ಗೆ ವಿವರಿಸಿದರು. ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಅವರು ಕೊಡಗು ಜಿಲ್ಲೆಯಲ್ಲಿ ಆದ ವಿಪತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯ ಡೀನ್ ಮತ್ತು ನಿರ್ದೇಶಕರಾದ ಡಾ. ಲೋಕೇಶ್ ಎ. ಜೆ. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಡಾ.ಈಶಾ ಬಿ. ರಾವ್ ಅವರು ಸಹ ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಸಮುದಾಯ ವೈದ್ಯ ಶಾಸ್ತ್ರ ವಿಭಾಗದ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ರಾಮಚಂದ್ರ ಕಾಮತ್ ಅವರು ಪ್ರಮುಖ ಪಾತ್ರ ವಹಿಸಿದರು.
ರಾಷ್ಟೀಯ ಸ್ವಯಂಸೇವಾ ಯೋಜನೆ ವಿದ್ಯಾರ್ಥಿಗಳಿಗೆ ಈ ಮಹತ್ವದತರಬೇತಿಯನ್ನು ನೀಡಲು ಸಂಪನ್ಮೂಲ ವ್ಯಕ್ತಿಗಳಾದ ಶ್ರೀ. ಶಿವಕುಮಾರ್ ಅವರ ತಂಡ ಆಗಮಿಸಿ ವಿಪತ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳು ಹಾಗೂ ಸುರಕ್ಷತಾ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯ ವಿವಿಧ ಕಾಲೇಜುಗಳಿಂದ ಸುಮಾರು 100 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಈ ತರಬೇತಿಯು ಮಾರ್ಚ್ 11ರಿಂದ 17ರವರೆಗೆ ನಡೆಯುತ್ತದೆ. ಈ ತರಬೇತಿಯು ಯುವಕರಲ್ಲಿ ವಿಪತ್ತು ನಿರ್ವಹಣೆ ಕುರಿತು ಅರಿವು ಹೆಚ್ಚಿಸುವುದರಲ್ಲಿ ಹಾಗೂ ಸಮಾಜ ಸೇವೆಯ ಮನೋಭಾವ ಬೆಳೆಸುವುದರಲ್ಲಿ ಕಾರ್ಯಕ್ರಮವು ಮಹತ್ವದ ಪಾತ್ರವಹಿಸುತ್ತದೆ.