ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಗೈಡ್ಸ್ ವಿದ್ಯಾರ್ಥಿನಿ ದಿಶಾ ಳಿಗೆ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯಿಂದ ರಾಜ್ಯ ಪುರಸ್ಕಾರ
ಕುಶಾಲನಗರ, ಜೂ.26: ಭಾರತ್ ಸ್ಕೌಟ್ಸ್ & ಗೈಡ್ಸ್ ನ ರಾಜ್ಯ ಸಂಸ್ಥೆಯ ವತಿಯಿಂದ ಉಡುಪಿಯಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ ಪ್ರತಿಭಾನ್ವಿತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳಿಗೆ ನೀಡಲ್ಪಟ್ಟ ರಾಜ್ಯ ಪುರಸ್ಕಾರಕ್ಕೆ ಕೊಡಗು ಜಿಲ್ಲೆಯಿಂದ ಭಾಜನರಾದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಬಿ.ದಿಶಾಳಿಗೆ ಸಂಸ್ಥೆಯ ರಾಜ್ಯ ಆಯುಕ್ತರಾದ ಶ್ರೀ ಪಿ.ಜಿ.ಆರ್.ಸಿಂಧ್ಯ ಸರ್ ಅವರು ರಾಜ್ಯ ಪುರಸ್ಕಾರ ನೀಡಿ ಪ್ರಶಸ್ತಿ ಪತ್ರ ವಿತರಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಬಿ.ದಿಶಾ ಶೇ.95.36 ರಷ್ಟು ಅಂಕಗಳಿಸಿ ಶಾಲೆಗೆ ಕೀರ್ತಿ ತಂದು ರಾಜ್ಯ ಪ್ರತಿಭಾ ಪುರಸ್ಕಾರದಲ್ಲಿ ಪ್ರಶಸ್ತಿ ಗಳಿಸಿರುವುದನ್ನು ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಶ್ಲಾಘಿಸಿದ್ದಾರೆ. ವಿದ್ಯಾರ್ಥಿನಿ ದಿಶಾಳ ಪ್ರತಿಭಾ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿರುವ ಭಾರತ್ ಸ್ಕೌಟ್ಸ್ & ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮತ್ತು ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ , ಈ ವಿದ್ಯಾರ್ಥನಿಯ ಪ್ರತಿಭಾ ಪುರಸ್ಕಾರಕ್ಕೆ ಸಹಕರಿಸಿದ ಜಿಲ್ಲಾ ಗೈಡ್ಸ್ ವಿಭಾಗದ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ ಹಾಗೂ ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಹಾಗೂ ವಿದ್ಯಾರ್ಥಿನಿಯ ಪೋಷಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ದಿಶಾ ಎಂಬ ವಿದ್ಯಾರ್ಥಿನಿಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಪ್ರೋತ್ಸಾಹ ನೀಡಿದ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮತ್ತು ಹೆಚ್ಚು ಅಂಕಗಳನ್ನು ಗಳಿಸಲು ಶ್ರಮಿಸಿದ ಶಾಲಾ ಶಿಕ್ಷಕರಿಗೆ ಹಾಗೂ ಪೋಷಕರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.

