ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Feb 11, 2026 - 00:07
 0  247
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ವತಿಯಿಂದ  ವಾತ್ಸಲ್ಯ ಕಿಟ್ ವಿತರಣೆ

ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ)ವಿರಾಜಪೇಟೆ ವತಿಯಿಂದ ತಾಲೂಕಿನಲ್ಲಿ ಅರ್ಹ ಅಸಹಾಯಕರಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು.

   ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿರಾಜಪೇಟೆ ತಾಲೂಕು ವ್ಯಾಪ್ತಿಯ ಒಟ್ಟು 67 ಜನರಿಗೆ ಮಾಶಾಸನ ಪ್ರತಿ ತಿಂಗಳು ನೀಡಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಹೊಸ ಮಾಶಾಸನ ಪಡೆಯುತ್ತಿರುವ 6 ಜನರಿಗೆ ಶ್ರೀ ಕ್ಷೇತ್ರದಿಂದ ವಾತ್ಸಲ್ಯ ಕಿಟ್‌ನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಹರೀಶ್ ಪಿ, ವಲಯದ ಮೇಲ್ವಿಚಾರಕ ಶಿವಕುಮಾರ್ ಹಾಗೂ ಪ್ರತಾಪ್, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಉಷಾರಾಣಿ, ಒಕ್ಕೂಟದ ಕಾರ್ಯದರ್ಶಿ, ಜನ ಜಾಗೃತಿ ಸದಸ್ಯರು ಹಾಗೂ ಸೇವಾ ಪ್ರತಿನಿಧಿಗಳು ಸಂಘದ ಸದಸ್ಯರ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0