ಬೆಂಗಳೂರಿನ ಪ್ರಣವ್ ಫೌಂಡೇಶನ್ ವತಿಯಿಂದ ತಾಲೂಕಿನ ಶಾಂತಳ್ಳಿ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಬೆಂಗಳೂರಿನ ಪ್ರಣವ್ ಫೌಂಡೇಶನ್ ವತಿಯಿಂದ ತಾಲೂಕಿನ ಶಾಂತಳ್ಳಿ ಸರ್ಕಾರಿ ಶಾಲಾ ಮಕ್ಕಳಿಗೆ  ನೋಟ್ ಪುಸ್ತಕ ವಿತರಣೆ

ಸೋಮವಾರಪೇಟೆ:ಬೆಂಗಳೂರಿನ ಪ್ರಣವ್ ಫೌಂಡೇಶನ್ ವತಿಯಿಂದ ತಾಲೂಕಿನ ಶಾಂತಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಗುರುವಾರ ವಿತರಣೆ ಮಾಡಲಾಯಿತು. ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಹಲವು ಯೋಜನೆಗಳನ್ನು ಮಾಡಿದೆ. ಈ ಅವಕಾಶವನ್ನು ಪೋಷಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಗುರುಪ್ರಸಾದ್ ಹೇಳಿದರು. ಪ್ರಣವ್ ಫೌಂಡೇಶನ್‌ನವರು ಜನಪರ ಕೆಲಸಗಳು ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭ ಫೌಂಡೇಶನ್‌ನ ಪದಾಧಿಕಾರಿಗಳಾದ ಪ್ರೇಮ್ ಸಾಗರ್, ಸಜನ್ ಮಂದಣ್ಣ, ಕೆ. ಪಿ.ಆಶೀತ್ ಶಾಲೆಯ ಮುಖ್ಯ ಶಿಕ್ಷಕ ಪರಮೇಶ್, ಸ್ಥಳೀಯರಾದ ಡಿ.ಎಸ್.ಲಿಂಗರಾಜು, ಕೆ.ಎಂ.ಕೃಷ್ಣಕುಮಾರ್, ಮಧುಕುಮಾರ್, ಧರ್ಮಪ್ಪ, ನಿಶಾಂತ್, ಕಿರಣ್ ಕುಮಾರ್ ಇದ್ದರು.