ಚೌಡ್ಲು ಗ್ರಾಮ ಪಂಚಾಯಿತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ನೀರು ಸಂಗ್ರಹ ಡ್ರಮ್ ವಿತರಣೆ
ಸೋಮವಾರಪೇಟೆ: ತಾಲೂಕಿನ ಚೌಡ್ಲು ಗ್ರಾಮ ಪಂಚಾಯಿತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶೇಖಡ 25 ರ ನಿಧಿಯಡಿ ವಾರ್ಡ್ ಸಂಖ್ಯೆ 2 ಮತ್ತು 3ರ ಸುಮಾರು 100 ಕುಟುಂಬಗಳಿಗೆ ಐನೂರು ಲೀಟರ್ ಸಾಮರ್ಥ್ಯದ ನೀರು ಸಂಗ್ರಹ ಡ್ರಮ್ ನೀಡಲಾಯಿತು. ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿ.ಎಸ್.ಗೀತಾ, ಉಪಾಧ್ಯಕ್ಷ ನತೀಶ್ ಮಂದಣ್ಣ, ಮಾಜಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಸದಸ್ಯರಾದ ಪ್ರವೀಣ್, ಜ್ಯೋತಿ ನೆಹರು, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪೂರ್ಣಕುಮಾರ್ ಹಾಗೂ ಸಿಬ್ಬಂದಿಗಳು ಇದ್ದರು.